ದೇಶ

ಕಾಶ್ಮೀರ ಪರಿಸ್ಥಿತಿ ಸುಧಾರಿಸಿದೆ: ರಾಜನಾಥ ಸಿಂಗ್

ಕಾಶ್ಮೀರ ಪರಿಸ್ಥಿತಿ ಸುಧಾರಿಸಿದೆ: ರಾಜನಾಥ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್
Published On :
ಶ್ರೀನಗರ: ಕಾಶ್ಮೀರದಲ್ಲಿನ ಪರಿಸ್ಥಿತಿ ಸುಧಾರಿಸಿದ್ದು, ಪ್ರವಾಸಿಗರನ್ನು ಸ್ವಾಗತಿಸಲು ಕಾಶ್ಮೀರಿಗರು ಸಿದ್ಧರಿದ್ದಾರೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. 
ನಾಲ್ಕು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಅವರು ಇಂದು ಶ್ರೀನಗರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಶ್ಮೀರದಲ್ಲಿನ ಪರಿಸ್ಥಿತಿ ಸುಧಾರಿಸಿದ್ದು, ಪ್ರವಾಸಿಗರನ್ನು ಸ್ವಾಗತಿಸಲು ಕಾಶ್ಮೀರಿಗರು ಸಿದ್ಧರಿದ್ದಾರೆ. ಕಾಶ್ಮೀರವನ್ನು ಮತ್ತೆ ಸ್ವರ್ಗವಾಗಿ ನಿರ್ಮಾಣ ಮಾಡಲು ಬಯಸಿದ್ದಾರೆಂದು ಹೇಳಿದ್ದಾರೆ. 
ಕಾಶ್ಮೀರ ಸಮಸ್ಯೆ ಬಗೆಹರಿಯವುದು ನಮಗೆ ಬೇಕು. ಸಮಸ್ಯೆ ಬಗೆಹರಿಕೆ ಕುರಿತಂತೆ ಯಾರ ಜೊತೆಗೆ ಬೇಕಾದರೂ ನಾನು ಮಾತನಾಡಲು ಸಿದ್ಧನಿದ್ದೇನೆ. ಈ ಮಾತನ್ನು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಈ ವಿಚಾರದಲ್ಲಿ ಯಾವುದೇ ರೀತಿ ನಿಬಂಧನೆಗಳು ನನ್ನಲ್ಲಿಲ್ಲ. ವರ್ಷದಲ್ಲಿ 5 ಬಾರಿಯಲ್ಲ ಅಗತ್ಯಬಿದ್ದರೆ, 50 ಬಾರಿ ಬೇಕಾದರೂ ನಾನು ಕಾಶ್ಮೀರಕ್ಕೆ ಬರುತ್ತೇನೆ. ಕಾಶ್ಮೀರ ಅಭಿವೃದ್ಧಿಗಾಗಿ ರೂ.1 ಲಕ್ಷ ಕೋಟಿ ಬಿಡುಗಡೆ ಮಾಡಲು ಮೋದಿ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಸಂವಿಧಾನದ 35(ಎ)ವಿಧಿಯ ವಿವಾದದ ಬಗ್ಗೆ ಮಾತನಾಡಿರುವ ಅವರು, ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ನ್ಯಾಯಾಲಯದ ಮೆಟ್ಟಿಲನ್ನೂ ಏರಿಲ್ಲ. ಜಮ್ಮು ಮತ್ತು ಕಾಶ್ಮೀರ ಜನತೆಯ ಮನಸ್ಸಿಗೆ ನೋವುಂಟು ಮಾಡುವಂತಹ ಯಾವುದೇ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆಯನ್ನು ಈ ಮೂಲಕ ನೀಡುತ್ತೇನೆಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.