ಬರ್ಕ್ಲಿ: ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಾಯ್ತಪ್ಪಿನಿಂದ ಲೋಕಸಭೆಯಲ್ಲಿರುವುದು 546 ಸ್ಥಾನಗಳು ಎಂದು ಹೇಳಿದ್ದಾರೆ.
ಇಂಡಿಯಾ at 70: ರಿಫ್ಲೆಕ್ಷನ್ ಆನ್ ದಿ ಪಾಥ್ ಫಾರ್ವರ್ಡ್ ಎಂಬ ವಿಷಯದ ಬಗ್ಗೆ ಮಾತನಾಡಿರುವ ರಾಹುಲ್ ಗಾಂಧಿ, ಲೋಕಸಭೆಯಲ್ಲಿರುವುದು 546 ಸ್ಥಾನಗಳು ಎಂದು ಬರ್ಕ್ಲಿಯಲ್ಲಿನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದಾಗ ಹೇಳಿದ್ದಾರೆ.
ರಾಹುಲ್ ಗಾಂಧಿ ಈ ಹಿಂದೆಯೂ ಹಲವು ಬಾರಿ ಭಾಷಣ ಮಾಡುವ ವೇಳೆ ಹಲವು ಬಾರಿ ಬಾಯ್ತಪ್ಪಿನಿಂದ ತಪ್ಪು ಮಾಹಿತಿ ಹೇಳಿದ್ದಾರೆ. ಪ್ರತಿ ಬಾರಿ ರಾಹುಲ್ ಗಾಂಧಿ ಬಾಯ್ತಪ್ಪಿನಿಂದ ಹೇಳಿಕೆ ನೀಡಿದಾಗಲೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೆ ಗುರಿಯಾಗುವಂತೆ ಈ ಬಾರಿಯೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ಬಗ್ಗೆ ಹಾಸ್ಯ ಮಾಡಲಾಗಿದೆ.