ಬೊಕ್ಕಸ ತುಂಬಿಸಿಕೊಳ್ಳುವುದನ್ನು ನಿಲ್ಲಿಸಿ, ಅಚ್ಚೇದಿನ್ ತನ್ನಿ: ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಕಿಡಿ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಿಂತ ಸಾಮಾನ್ಯ ಜನರಿಗೆ ಶೇ.50 ರಷ್ಟು ಬೆಲೆ ಕಡಿಮೆ ಮಾಡಿ ...
ರಣದೀಪ್ ಸಿಂಗ್ ಸುರ್ಜೆವಾಲಾ
ರಣದೀಪ್ ಸಿಂಗ್ ಸುರ್ಜೆವಾಲಾ
ನವದೆಹಲಿ: ನಿರಂತರವಾಗಿ ತೈಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಿಂತ ಸಾಮಾನ್ಯ ಜನರಿಗೆ ಶೇ.50 ರಷ್ಟು ಬೆಲೆ ಕಡಿಮೆ ಮಾಡಿ ಮಾರಾಟ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಜನರನ್ನು ಹಾಗೂ ದೇಶವನ್ನು ಲೂಟಿ ಮಾಡಿ ಬೊಕ್ಕಸ ತುಂಬಿಸಿಕೊಳ್ಳುವುದನ್ನು ನಿಲ್ಲಿಸಿ, ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ದೇಶದ ಜನರಿಗೆ ಅಚ್ಛೇ ದಿನ್ ತರಬೇಕೆಂದು ಒತ್ತಾಯಿಸಿದೆ.
ಪೆಟ್ರೋಲ್, ಡಿಸೇಲ್ ಬೆಲೆ ಗಗನಮುಖಿಯಾಗುತ್ತಿದ್ದು, ಜನ ಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ. ಮೋದಿ ಏನು ಮಾಡುತ್ತಿದ್ದಾರೆ? ಇದೇನಾ ಅವರು ನೀಡಿದ್ದಾ ಅಚ್ಚೇ ದಿನದ ಭರವಸೆ ಎಂದು ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com