ನವದೆಹಲಿ: ಹಿಂದುತ್ವವೆಂಬುದು ಒಬ್ಬರ ಆಹಾರ ಪದ್ಧತಿ, ಉಡುಗೆಗೆ ಸಂಬಂಧಪಟ್ಟಿದ್ದಲ್ಲ, ಮತ್ತೊಬ್ಬರನ್ನು ಇರುವಂತೆಯೇ ಒಪ್ಪಿಕೊಳ್ಳುವುದು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದಾರೆ.
ದೇಶದಲ್ಲಿ ಅಸಹಿಷ್ಣುತೆ ಹಾಗೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಮೋಹನ್ ಭಾಗ್ವತ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಹಿಂದುತ್ವ ಎಂದರೆ ಇತರರನ್ನು ಇರುವಂತೆಯೇ ಒಪ್ಪಿಕೊಳ್ಳುವುದು ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ.