ದೆಹಲಿ ವಿವಿ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಎನ್ಎಸ್ ಯುಐಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ(ಡಿಯುಎಸ್ ಯು)ದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವಿದ್ಯಾರ್ಥಿ ಸಂಘಟನೆ...
ರಾಕಿ ತುಸೀದ್‌
ರಾಕಿ ತುಸೀದ್‌
ನವದಹೆಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ(ಡಿಯುಎಸ್ ಯು)ದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ) ಭರ್ಜರಿ ಪುನರಾಗಮನ ಮಾಡಿದ್ದು, ಅಧ್ಯಕ್ಷ ಸ್ಥಾನ ಮತ್ತು ಉಪಾಧ್ಯಕ್ಷ ಸ್ಥಾನ ಗೆದ್ದು ಸಂಭ್ರಮಿಸಿದೆ.
ಎನ್ಎಸ್ ಯು ಐ 2012ರ ನಂತರ ಇದೇ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನ ತನ್ನದಾಗಿಸಿಕೊಂಡಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ನಾಲ್ಕರ ಪೈಕಿ ಮೂರು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಈ ಬಾರಿ ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಸ್ಥಾನ ಮಾತ್ರ ಗೆಲ್ಲವಲ್ಲಿ ಸಫ‌ಲವಾಗಿದ್ದು ಅಧ್ಯಕ್ಷ ಸ್ಥಾನ ಕಳೆದುಕೊಂಡು ಹಿನ್ನಡೆ ಅನುಭವಿಸಿದೆ.
ಎನ್‌ಎಸ್‌ಐಯುನ ರಾಕಿ ತುಸೀದ್‌ ಅಧ್ಯಕ್ಷರಾಗಿ ಹಾಗೂ ಕುನಾಲ್‌ ಶೆರಾವತ್‌ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಎಬಿವಿಪಿಯ ನಿಕುಂಜ್‌ ಮಕ್ವಾನ್‌ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಪಂಕಜ್‌ ಕೇಸರಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ದೆಹಲಿ ವಿವಿ ಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಎಬಿವಿಪಿ ಮುಖಂಡರೊಬ್ಬರು, ಕಳೆದ 4 ವರ್ಷಗಳಿಂದ ನಾವೇ ಗೆಲ್ಲುತ್ತಿದ್ದೆವು. ಆದರೆ ಈ ಬಾರಿ ಎನ್‌ಎಸ್‌ಐಯು ತಂತ್ರ ಹೂಡಿ ಎಡ ಪಕ್ಷಗಳ ಬೆಂಬಲಿತ ವಿದ್ಯಾರ್ಥಿ ಸಂಘದೊಂದಿಗೆ ಮೈತ್ರಿ ಮಾಡಿಕೊಂಡು ನಮ್ಮನ್ನು ಸೋಲಿಸಿದೆ ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com