ದೆಹಲಿಯಲ್ಲಿ 10 ವರ್ಷ ಹಳೆಯ ಡೀಸೆಲ್ ವಾಹನಗಳ ನಿಷೇಧ ತೆರವಿಗೆ ಎನ್ ಜಿಟಿ ನಕಾರ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ 10 ವರ್ಷ ಹಳೆಯದಾದ ಎಲ್ಲಾ ಡೀಸೆಲ್ ವಾಹನಗಳಿಗೆ ಹೇರಿದ್ದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ 10 ವರ್ಷ ಹಳೆಯದಾದ ಎಲ್ಲಾ ಡೀಸೆಲ್ ವಾಹನಗಳಿಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‌ಜಿಟಿ) ಗುರುವಾರ ನಿರಾಕರಿಸಿದೆ.
10 ವರ್ಷ ಹಳೆಯದಾದ ಡೀಸೆಲ್ ವಾಹನ ಬಳಸುವುದರಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಸಾಬೀತಪಡಿಸುವಲ್ಲಿ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವಾಲಯ ವಿಫಲವಾಗಿದೆ ಎಂದು ಹಸಿರು ಪೀಠ ತಿಳಿಸಿದೆ.
ಒಂದು ಹೊಸ ಡೀಸೆಲ್ ಕಾರು 24 ಪೆಟ್ರೋಲ್ ಕಾರುಗಳಿಗೆ ಹಾಗೂ 84 ಸಿಎನ್ ಜಿ ಕಾರುಗಳಿಗೆ ಸಮ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿ. ಹೀಗಾಗಿ ಡೀಸೆಲ್ ವಾಹನಗಳ ಮೇಲಿನ ನಿಷೇಧ ಹಿಂಪಡೆಯುವುದಿಲ್ಲ ಎಂದು ಎನ್‌ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶ(ಎನ್ ಸಿಆರ್)ದಲ್ಲಿ ಯಾವುದೇ ರೀತಿಯ ಭಾರಿ ಹಾಗೂ ಲಘು ಡೀಸೆಲ್  ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸುವಂತೆ ಎನ್ ಜಿಟಿ ಏಪ್ರಿಲ್ 2015ರಲ್ಲಿ ಮಹತ್ವದ ಆದೇಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com