ಗುರುಗ್ರಾಮ್: ರಯಾನ್ ಶಾಲಾ ವಿದ್ಯಾರ್ಥಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿದ ಹರಿಯಾಣ ಸರ್ಕಾರ

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗುರುಗ್ರಾಮದ ಸೋಹ್ನಾ ಪ್ರದೇಶದಲ್ಲಿರುವ ರ್ಯಾನ್ ಇಂಟರ್ ನ್ಯಾಷನಲ್....
ಶಾಲೆ ಬಳಿ ಭದ್ರತಾ ಸಿಬ್ಬಂದಿ
ಶಾಲೆ ಬಳಿ ಭದ್ರತಾ ಸಿಬ್ಬಂದಿ
Updated on: 
ಗುರುಗ್ರಾಮ: ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಗುರುಗ್ರಾಮದ ಸೋಹ್ನಾ ಪ್ರದೇಶದಲ್ಲಿರುವ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ವಿದ್ಯಾರ್ಥಿ ಪ್ರಧುಮಾನ್ ಥಾಕೂರ್(7 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿರುವ ಹರಿಯಾಣ ಸರ್ಕಾರ, ಮೂರು ತಿಂಗಳ ಕಾಲ ಶಾಲಾ ಉಸ್ತುವಾರಿಯನ್ನು ವಹಿಸಿಕೊಂಡಿದೆ.
ಹರಿಯಾಣ ಸಿಎಂ ಖಟ್ಟರ್ ಅವರು ಇಂದು ಹತ್ಯೆಯಾದ ವಿದ್ಯಾರ್ಥಿಯ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೋಹರ್ ಲಾಲ್ ಖಟ್ಟರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿ ಹತ್ಯೆಯ ಹಿಂದಿನ ಆಕ್ರೋಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಕಳೆದ ವಾರ ಪ್ರಧುಮಾನ್ ಥಾಕೂರ್ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಹರಿಯಾಣ ಪೊಲೀಸರು ಈಗಾಗಲೇ 10 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಕಳೆದುಕೊಂಡ ಕೊಲೆಯಾದ ವಿದ್ಯಾರ್ಥಿ ಪ್ರಧುಮಾನ್ ಥಾಕೂರ್ ತಂದೆ ವರಣ್ ಥಾಕೂರ್ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಹರಿಯಾಣ ಸಿಎಂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com