ಬಾಹ್ಯ ಬೆದರಿಕೆಗಳಿಂದ ದೇಶದ ಜನರನ್ನು ರಕ್ಷಿಸಲು ಸೇನೆ ಸರ್ವ ಸನ್ನದ್ಧವಾಗಿದೆ: ರಕ್ಷಣಾ ಸಚಿವೆ

ದೇಶದ ನಾಗರೀಕರ ಜೀವನವನ್ನು ಯಾವುದೇ ರೀತಿಯ ಬಾಹ್ಯ ಬೆದರಿಕೆಗಳಿಂದ ರಕ್ಷಣೆ ಮಾಡಲು ಭಾರತೀಯ ಸೇನೆ ಮತ್ತು ರಕ್ಷಣಾ ಸಚಿವಾಲಯ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್...
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
Updated on: 
ವಾರಣಾಸಿ: ದೇಶದ ನಾಗರೀಕರ ಜೀವನವನ್ನು ಯಾವುದೇ ರೀತಿಯ ಬಾಹ್ಯ ಬೆದರಿಕೆಗಳಿಂದ ರಕ್ಷಣೆ ಮಾಡಲು ಭಾರತೀಯ ಸೇನೆ ಮತ್ತು ರಕ್ಷಣಾ ಸಚಿವಾಲಯ ಸಮರ್ಥವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಯಾವುದೇ ಸನ್ನಿವೇಶವನ್ನು ಎದುರಿಸಲು ನಮ್ಮ ಸೇನೆ ಮತ್ತು ರಕ್ಷಣಾ ಸಚಿವಾಲಯ ಸರ್ವ ಸನ್ನದ್ಧವಾಗಿದೆ. ಹೀಗಾಗಿ ದೇಶದ ಜನತೆ ತಮ್ಮ ಕುಟುಂಬದೊಂದಿಗೆ ಶಾಂತಿಯುತವಾಗಿ ಜೀವನ ನಡೆಸಬಹುದು ಎಂಬ ಭರವಸೆಯನ್ನು ನೀಡುತ್ತೇನೆಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರ ಗಡಿಗಳಲ್ಲಿ ಪಾಕಿಸ್ತಾನ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆಗಳ ಬಗ್ಗೆ ಸಚಿವಾಲಯ ಕಣ್ಗಾವಲಿಸರಿಸಿದೆ. ಪ್ರಸ್ತುತದ ಪರಿಸ್ಥಿತಿಯಲ್ಲಿ ಕದ ವಿರಾಮ ಉಲ್ಲಂಘನೆ ಕುರಿತಂತೆ ಯಾವುದೇ ರೀತಿಯ ಹೇಳಿಕೆಗಳನ್ನು ನಾನು ನೀಡುವುದಿಲ್ಲ. ಆದರೆ, ಕದನ ವಿರಾಮಗಳ ಮೇಲೆ ರಕ್ಷಣಾ ಸಚಿವಾಲಯ ಹಾಗೂ ಗೃಹ ಸಚಿವಾಲಯ ಕಣ್ಗಾವಲಿರಿಸಿದೆ ಎಂಬುದನ್ನು ಮಾತ್ರ ಹೇಳಬಲ್ಲೆ ಎಂದಿದ್ದಾರೆ. 
ಇದೇ ವೇಳೆ ಡೋಕ್ಲಾಮ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಡೋಕ್ಲಾಂ ವಿವಾದ ಕುರಿತಂತೆ ಭಾರತದ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ವಿದೇಶಾಂಗ ಸಚಿವಾಲಯ ವಿವಾದ ಕುರಿತಂತೆ ಹೇಳಿಕೆಯನ್ನು ನೀಡಿದ್ದು, ಇನ್ನು ಈ ಬಗ್ಗೆ ನಾನು ಏನನ್ನೂ ಹೇಳಲು ಇಚ್ಛಿಸುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com