ಆಂತರಿಕ ಚುನಾವಣೆ ಮೂಲಕ ಅಧ್ಯಕ್ಷರಾಗಲು ರಾಹುಲ್ ಗಾಂಧಿ ಬಯಸಿದ್ದಾರೆ: ಮೊಯ್ಲಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಆಂತರಿಕ ಚುನಾವಣೆ ಪ್ರಕ್ರಿಯೆಯ ಮೂಲಕ ಪಕ್ಷದ ಅಧ್ಯಕ್ಷರಾಗಲು ಬಯಸಿದ್ದಾರೆ....
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಹೈದರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಆಂತರಿಕ ಚುನಾವಣೆ ಪ್ರಕ್ರಿಯೆಯ ಮೂಲಕ ಪಕ್ಷದ ಅಧ್ಯಕ್ಷರಾಗಲು ಬಯಸಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಶುಕ್ರವಾರ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಇತ್ತೀಚಿಗಷ್ಟೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳಲು ನಾನು ಸಿದ್ಧ ಎಂದಿದ್ದರು. ಇದರ ಬೆನ್ನಲ್ಲೇ ಈಗ ವೀರಪ್ಪ ಮೊಯ್ಲಿ ಅವರು ರಾಹುಲ್ ಗಾಂಧಿ ಅವರು ಆಂತರಿಕ ಚುನಾವಣೆ ಪ್ರಕ್ರಿಯೆ ಮೂಲಕ ಪಕ್ಷದ ಅಧ್ಯಕ್ಷರಾಗಲು ಬಯಸಿದ್ದು, ಮುಂದಿನ ತಿಂಗಳು ಎಐಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ತಕ್ಷಣ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು. ಇದರಿಂದ ಪಕ್ಷಕ್ಕೆ ಮತ್ತು ದೇಶಕ್ಕೆ ಒಳ್ಳೆಯದು ಎಂದು ಮೊಯ್ಲಿ ತಿಳಿಸಿದ್ದಾರೆ.
ರಾಜ್ಯಗಳಲ್ಲಿ ನಡೆಯುತ್ತಿರುವ ಆಂತರಿಕ ಚುನಾವಣೆಗಳು ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದ್ದು, ಬಳಿಕ ಎಐಸಿಸಿ ಮಟ್ಟದ ಆಂತರಿಕ ಚುನಾವಣೆ ನಡೆಯಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮೊಯ್ಲಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಮುಂದಿನ ತಿಂಗಳು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆಯೇ? ಎಂಬ ಪ್ರಶ್ನೆಗೆ, 'ಹೌದು, ವಹಿಸಿಕೊಳ್ಳುವ ಸಾಧ್ಯತೆ ಇದೆ' ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com