ತಿರುನೆಲ್ವೆಲಿ: ಆಂಧ್ರ ಪ್ರವಾಸಿಗರ ಮೇಲೆ ಹರಿದ ಸಿಮೆಂಟ್ ಲಾರಿ, ಐವರು ಸಾವು

ಭಾರಿ ವೇಗವಾಗಿ ಚಲಿಸುತ್ತಿದ್ದ ಸಿಮೆಂಟ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶ ಪ್ರವಾಸಿಗರ ಮೇಲೆ ಹರಿದಿದ್ದು,....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ತಿರುನೆಲ್ವೆಲಿ: ಭಾರಿ ವೇಗವಾಗಿ ಚಲಿಸುತ್ತಿದ್ದ ಸಿಮೆಂಟ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಂಧ್ರಪ್ರದೇಶ ಪ್ರವಾಸಿಗರ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳಗಿನ ಜಾವ ತಮಿಳುನಾಡಿನ ತಿರುನೆಲ್ವೆಲಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತ ಪ್ರವಾಸಿಗರು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರದಿಂದ ಕನ್ಯಾಕುಮಾರಿಗೆ ತೆರಳುತ್ತಿದ್ದ ಪ್ರವಾಸಿಗರು ಬ್ರೇಕ್ ಗಾಗಿ ತಮ್ಮ ಬಸ್ ಅನ್ನು ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ವೇಗವಾಗಿ ಬಂದ ಸಿಮೆಂಟ್ ಲಾರಿ ರಸ್ತೆಯಲ್ಲಿದ್ದ ಪ್ರವಾಸಿಗರ ಮೇಲೆ ಹರಿದು ಬಳಿಕ ಬಸ್ ಗೆ ಡಿಕ್ಕಿ ಹೊಡೆದಿದೆ.
ಮೃತರನ್ನು ರತ್ನಾ ಮಾನಿಕ್ಯಂ(56), ನಾಗವರ್ದಿನಿ(45), ವೆಂಕಟ್ ರಾಮರಾವ್(63), ಸತ್ಯಂ(50) ಹಾಗೂ ರಾಮ್ ಮೋಹನ್ ರಾವ್(70) ಎಂದು ಗುರುತಿಸಲಾಗಿದೆ. 
ಈ ಸಂಬಂಧ ತಿರುನೆಲ್ವೆಲಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ನಂತರ ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com