ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿ, 5 ಗಾಯ

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿದ್ದು, ಐವರಿಗೆ ಗಾಯವಾಗಿರುವ...
ಗಾಯಗೊಂಡಿರುವ ನಾಗರೀಕರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ಗಾಯಗೊಂಡಿರುವ ನಾಗರೀಕರನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದು
ಅರ್ನಿಯಾ: ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ನಾಗರೀಕ ಬಲಿಯಾಗಿದ್ದು, ಐವರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಅರ್ನಿಯಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕಳೆದ ರಾತ್ರಿಯಿಂದಲೂ ಭಾರತೀಯ ಸೇನೆ ಹಾಗೂ ನಾಗರೀಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಲಿದೆ. ಪಾಕಿಸ್ತಾನದ ದುರ್ವರ್ತನೆಯಿಂದಾಗಿ ಗಡಿಯಲ್ಲಿದ್ದ 6 ನಾಗರೀಕರಿಗೆ ಗಂಭೀರವಾಗಿ ಗಾಯಗೊಂಡಿದ್ದರು. 
ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಇದೀಗ ಗಡಿಯಲ್ಲಿ ಗುಂಡಿನ ಚಕಮಕಿಗಳು ಸ್ಥಗಿತಗೊಂಡಿವೆ ಎಂದು ವರದಿಗಳು ತಿಳಿಸಿವೆ. 
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ 6 ಮಂದಿಯ ಪೈಕಿ ಓರ್ವ ನಾಗರೀಕರ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಸೆಪ್ಟಂಬರ್ 15 ರಂದು ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com