ಪ್ರಧಾನಿ ಮೋದಿ ಜನ್ಮ ದಿನ: ಬಿಜೆಪಿಯಿಂದ ದೇಶಾದ್ಯಂತ 'ಸೇವಾ ದಿವಸ್' ಆಚರಣೆ

ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಜನ್ಮ ದಿನಾಚರಣೆ ನಿಮಿತ್ತ ಭಾನುವಾರ ದೇಶಾದ್ಯಂತ ಬಿಜೆಪಿ ಪಕ್ಷದ ಮುಖಂಡರು ಸೇವಾ ದಿನವಾಗಿ ಆಚರಣೆ ಮಾಡುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಜನ್ಮ ದಿನಾಚರಣೆ ನಿಮಿತ್ತ ಭಾನುವಾರ ದೇಶಾದ್ಯಂತ ಬಿಜೆಪಿ ಪಕ್ಷದ ಮುಖಂಡರು ಸೇವಾ ದಿನವಾಗಿ ಆಚರಣೆ ಮಾಡುತ್ತಿದ್ದಾರೆ.

ದೇಶದ ಪ್ರಮುಖ ನಗರಗಳಲ್ಲಿ ಬಿಜೆಪಿ ಕಾರ್ಯಕರ್ತರು ವೈದ್ಯಕೀಯ ಕ್ಯಾಂಪ್ ಗಳು, ರಕ್ತದಾನ ಶಿಬಿರ ಸೇರಿದಂತೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರಧಾನಿ ಮೋದಿ ಜನ್ಮ ದಿನವನ್ನು ಸೇವಾದಿನವಾಗಿ  ಆಚರಣೆ ಮಾಡುತ್ತಿದ್ದಾರೆ. ರಾಂಚಿಯಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಾಲ್ಗೊಂಡಿದ್ದು, ದೆಹಲಿಯ ಕೀರ್ತಿ ನಗರದಲ್ಲಿನ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ  ಪಾಲ್ಗೊಂಡಿದ್ದಾರೆ.

ಚೆನ್ನೈನಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಅವರು ಮುಂಬೈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇದು  ಮಾತ್ರವಲ್ಲದೇ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನ ನಿಮಿತ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com