ಹರಿಯಾಣ ಹಿಂಸಾಚಾರ: ಮೋಸ್ಟ್ ವಾಟೆಂಡ್ ಲಿಸ್ಟ್ ಬಿಡುಗಡೆ ಮಾಡಿದ ಪೊಲೀಸರು

ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಗುರ್ಮಿತ್ ಬೆಂಬಲಿಗರು ನಡೆಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳ ಪಟ್ಟಿಯನ್ನು...
ರಾಮ್ ರಹೀಂ ಸಿಂಗ್ ಮತ್ತು ಹನಿಪ್ರೀತ್ ಸಿಂಗ್
ರಾಮ್ ರಹೀಂ ಸಿಂಗ್ ಮತ್ತು ಹನಿಪ್ರೀತ್ ಸಿಂಗ್
Updated on
ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಗುರ್ಮಿತ್ ಬೆಂಬಲಿಗರು ನಡೆಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳ ಪಟ್ಟಿಯನ್ನು ಹರಿಯಾಣ ಪೊಲೀಸರು ಸೋಮವಾರ ಬಿಡುಗಡೆ ಮಾಡಿದ್ದಾರೆ. 
ಹಿಂಸಾಚಾರ ಪ್ರಕರಣ ಸಂಬಂಧ ನ್ಯಾಯಾಲಯ ಲುಕ್'ಔಟ್ ನೋಟಿಸ್ ಜಾರಿ ಮಾಡಿದ್ದರೂ, ವಿಚಾರಣೆ ಹಾಜರಾಗದೆ ತಲೆ ಮರೆಸಿಕೊಂಡಿರುವ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ದತ್ತು ಪುತ್ರಿ ಹನಿಪ್ರೀತ್, ಹಾಗೂ ಡೇರಾ ವಕ್ತಾರ ಆದಿತ್ಯಾ ಇನ್ಸಾನ್ ಹೆಸರು ಕೂಡ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 
ಹಿಂಸಾಚಾರದಲ್ಲಿ ತೊಡಗಿದ್ದ ಹಾಗೂ ಪ್ರಚೋದನೆ ನೀಡಿರುವುದರ ಕುರಿತಂತೆ ಶಂಕಿತ 43 ಆರೋಪಿಗಳ ಫೋಟೋಗಳನ್ನು ಪೊಲೀಸರು ಇಂದು ಬಿಡುಗಡೆ ಮಾಡಿದ್ದಾರೆ. ಹಿಂಸಾಚಾರದ ವೇಲೆ ಟಿವಿ ಚಾನೆಲ್ ಗಳು ಬಿತ್ತರಿಸಿದ್ದ ವಿಡಿಯೋಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳಿಂದ ಈ ಫೋಟೋಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಆದರೆ, ಫೋಟೋದಲ್ಲಿರುವ ದುಷ್ಕರ್ಮಿಗಳ ಗುರ್ತಿಕೆ ಈವರೆಗೂ ತಿಳಿದುಬಂದಿಲ್ಲ. 
ಅತ್ಯಾಚಾರ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ಸಾಬೀತಾದ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ವೇಳೆ ಗುರ್ಮಿತ್ ಬೆಂಬಲಿಗರು ಪಂಚಕುಲದಲ್ಲಿ ಹಿಂಸಾಚಾರ ನಡೆಸಿದ್ದರು. ಪರಿಣಾಮ 41 ಮಂದಿ ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಗುರ್ಮಿತ್ ಬಂಧನದ ವೇಳೆ ಆತನನ್ನು ಅಪಹರಣ ಮಾಡಲು ಡೇರಾ ಗೂಂಡಾಗಳು ಯೋಜನೆ ರೂಪಿಸಿದ್ದರು. ಈ ಯೋಜನೆಯಲ್ಲಿ ಹನಿಪ್ರೀತ್ ಕೈವಾಡ ಕೂಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ  ಆಕೆಯ ಮೇಲೆ ಪ್ರಕರಣ ದಾಖಲಾಗಿತ್ತು. ಸೆ.1 ರಂದು ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದಾದ ಬಳಿಕ ಹನಿಪ್ರೀತ್ ತಲೆಮರೆಸಿಕೊಂಡಿದ್ದು, ಇನ್ನೂ ಆಕೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com