ಮಲೆಯಾಳಂ ನಟಿ ದೌರ್ಜನ್ಯ ಪ್ರಕರಣ: 4ನೇ ಬಾರಿ ನಟ ದಿಲೀಪ್ ಜಾಮೀನು ಅರ್ಜಿ ವಜಾ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ....
ದಿಲೀಪ್
ದಿಲೀಪ್
ಕೊಚ್ಚಿ: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದಿಲೀಪ್ ಅವರು ನಾಲ್ಕನೆ ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ನಟ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಂಗಮಲ್ಯ ಮ್ಯಾಜಿಸ್ಟ್ರೇಟ್ ಕೋರ್ಟ್, ಆರೋಪಿ 60 ದಿನ ಜೈಲಿನಲ್ಲಿ ಕಳೆದಿದ್ದರೂ ಕಾನೂನು ಬದ್ಧ ಜಾಮೀನಿಗೆ ಅರ್ಹತೆ ಹೊಂದಿಲ್ಲ ಎಂದು ಹೇಳಿದೆ. ಈ ಹಿಂದೆ ಇದೇ ಕೋರ್ಟ್ ಮಲೆಯಾಳಂ ನಟನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಕೇರಳ ಹೈಕೋರ್ಟ್ ಎರಡು ಬಾರಿ ದಿಲೀಪ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಬಾರಿ ಜಾಮೀನು ಪಡೆಯಲು ಹೊಸ ತಂತ್ರ ರೂಪಿಸಿದ್ದ ದಿಲೀಪ್ ಪರ ವಕೀಲರು, ತಮ್ಮ ಕಕ್ಷಿದಾರ 60 ದಿನಗಳ ನ್ಯಾಯಾಂಗ ಬಂಧನ ಅವಧಿಯನ್ನು ಪೂರೈಸಿರುವುದರಿಂದ ಅವರು ಕಾನೂನು ಬದ್ಧ ಜಾಮೀನಿಗೆ ಅರ್ಹರಾಗಿದ್ದಾರೆ ಎಂದು ವಾದಿಸಿದ್ದರು. ಆದರೆ ನಟನ ಪರ ವಕೀರಲ ವಾದವನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.
ಮಲೆಯಾಳಂ ನಟಿ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕಳೆದ ಕಳೆದ ಜುಲೈ 10ರಂದು ಬಂಧನಕ್ಕೊಳಗಾಗಿದ್ದ ದಿಲೀಪ್ ಅವರು ಈ ಹಿಂದೆ ಜಾಮೀನು ಕೋರಿ ಮೂರು ಬಾರಿ ಅರ್ಜಿ ಸಲ್ಲಿಸಿದ್ದರೂ ಅವರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿರಲಿಲ್ಲ. ಈಗ ನಾಲ್ಕನೆ ಪ್ರಯತ್ನವೂ ವಿಫಲವಾಗಿದೆ.
ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ನಟ ದಿಲೀಪ್ ಅವರನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com