ಅರುಣ್ ಜೇಟ್ಲಿ
ದೇಶ
ಕುಟುಂಬ ರಾಜಕೀಯ ಕುರಿತ ರಾಹುಲ್ ಗಾಂಧಿ ಹೇಳಿಕೆಯಿಂದ 'ಮುಜುಗರವಾಗಿದೆ': ಜೇಟ್ಲಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವ ಅರುಣ್....
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಭಾರತದ ಕುಟುಂಬ ರಾಜಕೀಯ ಕುರಿತ ಅವರ ಹೇಳಿಕೆಯಿಂದ ಮುಜುಗರವಾಗಿದೆ ಎಂದಿದ್ದಾರೆ.
ಯಾರೊ ಒಬ್ಬರು ಅಮೆರಿಕದಲ್ಲಿ ಕುಳಿತುಕೊಂಡು ಕುಟುಂಬ ರಾಜಕೀಯ ಭಾರತದ ಗುಣ ಎಂದು ಹೇಳಿರುವುದರಿಂದ ಮುಜುಗರವಾಗಿದೆ ಎಂದು ಅರುಣ್ ಜೇಟ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಲವು ಪಕ್ಷಗಳು ಕುಟುಂಬ ರಾಜಕೀಯ ತಮ್ಮ ಆಸ್ತಿ ಎಂದು ಭಾವಿಸಿದ್ದಾರೆ. ಆದರೆ ಅದು ಬಹಳ ದಿನ ಉಳಿಯುವುದಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಇತ್ತಿಚೀಗೆ ವಂಶಪಾರಂಪರಿಕತೆಯನ್ನು ಸಮರ್ಥಿಸಿಕೊಂಡಿದ್ದರು. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಭಾರತದಲ್ಲಿ ಕುಟುಂಬ ರಾಜಕೀಯ ವಾಸ್ತವ. ಅನೇಕ ನಾಯಕರು ಕುಟುಂಬ ರಾಜಕೀಯದ ಹಿನ್ನೆಲೆಯಿಂದ ಬಂದಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ