2ಜಿ ಹಗರಣ: ವಿಚಾರಣೆ ಅಕ್ಟೋಬರ್ 25ಕ್ಕೆ ಮುಂದೂಡಿದ ಸಿಬಿಐ ಕೋರ್ಟ್

ಮಾಜಿ ಟೆಲೆಕಾಂ ಸಚಿವ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರ ವಿರುದ್ಧ 2ಜಿ ಸ್ಪೆಕ್ಟ್ರಂ ಹಗರಣದ....
ಎ ರಾಜಾ
ಎ ರಾಜಾ
ನವದೆಹಲಿ: ಮಾಜಿ ಟೆಲೆಕಾಂ ಸಚಿವ ಎ ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಅವರ ವಿರುದ್ಧದ 2ಜಿ ಸ್ಪೆಕ್ಟ್ರಂ ಹಗರಣದ ಅಂತಿಮ ವಿಚಾರಣೆಯನ್ನು ಸಿಬಿಐ ವಿಶೇಷ ಕೋರ್ಟ್ ಬುಧವಾರ ಅಕ್ಟೋಬರ್ 25ಕ್ಕೆ ಮುಂದೂಡಿದೆ.
ಸಿಬಿಐ ವಿಶೇಷ ನ್ಯಾಯಾಧೀಶ ಒ ಪಿ ಸೈನಿ ಅವರು, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ದಾಖಲೆಗಳು ಅಗಾಧ ಪ್ರಮಾಣದಲ್ಲಿದ್ದು, ತಾಂತ್ರಿಕವಾಗಿರುವುದರಿಂದ ಇನ್ನೂ ಪರಿಶೀಲನೆಯ ಹಂತದಲ್ಲಿವೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದ್ದಾರೆ.
ದಾಖಲೆಗಳ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುವುದರಿಂದ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಲಾಗಿದೆ ಎಂದು ಸೈನಿ ತಿಳಿಸಿದ್ದಾರೆ. ಅಲ್ಲದೆ ಮುಂದಿನ ವಿಚಾರಣೆ ವೇಳೆ ತೀರ್ಪಿನ ದಿನಾಂಕ ನಿಗದಿಪಡಿಸುವುದಾಗಿ ಹೇಳಿದ್ದಾರೆ.
2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎರಡು ಪ್ರತ್ಯೇಕ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದು, ಒಂದು ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದರೆ, ಮತ್ತೊಂದು ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com