ಹೋಟೆಲ್ ಲಲಿತ್ ಮಹಲ್ ಅನ್ನು ಕರ್ನಾಟಕ ಸರ್ಕಾರದ ಸುಪರ್ದಿಗೆ ಒಪ್ಪಿಸಲು ಕೇಂದ್ರ ತೀರ್ಮಾನ

ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಲಲಿತ್ ಮಹಲ್ ಪ್ಯಾಲೇಸ್
ಲಲಿತ್ ಮಹಲ್ ಪ್ಯಾಲೇಸ್
ವದೆಹಲಿ: ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ  ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
1931ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿದ ಈ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ವಹಣೆ ಮಾಡುತ್ತಿದ್ದವು. ಈಗ ಸಂಪೂರ್ಣವಾಗಿ ರಾಜ್ಯ ಸರ್ಕಾರಕ್ಕೆ ಹೋಟೇಲನ್ನು ಹಸ್ತಾಂತರಿಸಲಾಗುತ್ತದೆ ಎಂದು ಜೇಟ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದರ ಜತೆಗೆ ಐಟಿಡಿಸಿ ಆಡಳಿತದಲ್ಲಿದ್ದ ಹೋಟೆಲ್ ಜೈಪುರ್ ಅಶೋಕ್ ನ್ನು ರಾಜಸ್ಥಾನ ಸರಕಾರಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ದಿನದ  ಸಂಪುಟ ಸಭೆಯ ಇತರೆ ತೀರ್ಮಾನಗಳು:
ಕೇಂದ್ರ ರೈಲ್ವೇ ನೌಕರರಿಗೆ ದಸರಾ ಉಡುಗೊರೆಯಾಗಿ ಬೋನಸ್ ಘೋಷಣೆ.
ಜಮ್ಮು ಕಾಶ್ಮೀರದ ವಿಶೇಷ ಕೈಗಾರಿಗೆ ಉತ್ತೇಜನ ಯೋಜನೆಗೆ ಅನುಮೋದನೆ.
ಉಡಾನ್ ಯೋಜನೆಯ ಅವಧಿ ಡಿ. 31ರವೆರೆಗೆ ವಿಸ್ತರಣೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com