22 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮುಖ್ಯ ಶಿಕ್ಷಕನಿಗೆ 55 ವರ್ಷ ಜೈಲು ಶಿಕ್ಷೆ

22 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದುರೈ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ವಿಶೇಷ ನ್ಯಾಯಾಲಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮದುರೈ: 22 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದುರೈ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ವಿಶೇಷ ನ್ಯಾಯಾಲಯ 55 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಮದುರೈ ಜಿಲ್ಲೆಯ ಪಧಂಬು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಎಸ್ ಆರೋಗ್ಯಸ್ವಾಮಿ ವಿರುದ್ಧ ದಲಿತ ವಿದ್ಯಾರ್ಥಿನಿಯರು ಸೇರಿದಂತೆ 91 ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಗಳು ದೂರು ನೀಡಿದ್ದರು. ಪ್ರಕರಣ ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ಕಾಮುಕ ಶಿಕ್ಷಕನಿಗೆ 55 ವರ್ಷ ಜೈಲು ಶಿಕ್ಷೆ ಹಾಗೂ 3.4 ಲಕ್ಷ ರುಪಾಯಿ ದಂಡ ವಿಧಿಸಿದೆ.
ಏಳು ವರ್ಷಗಳ ಹಿಂದೆ ಪಂಜು ಎಂಬುವವರು ತಮ್ಮ ಮಗಳ ಮೇಲೆ ಲೈಂಗಿಕ ಆರೋಗ್ಯಸ್ವಾಮಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರಿಗೆ ದಿನಕ್ಕೊಂದು ಆಶ್ಚರ್ಯ ಕಾದಿತ್ತು. ತನಿಖೆ ವೇಳೆ ಆರೋಗ್ಯಸ್ವಾಮಿ ಹಲವು ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಆರ್ ಷಣ್ಮುಗ ಸುಂದರಂ ಅವರು, ಕಾಮುಕ ಶಿಕ್ಷಕನಿಗೆ ಭಾರತೀಯ ದಂಡ ಸಂಹಿತೆಯ ಎಸ್ ಎಸ್ ಟಿ ಕಾಯಿದೆ ಅಡಿ ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯಿದೆಯಡಿ 55 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ ಇದೊಂದು ಐತಿಹಾಸಿಕ ತೀರ್ಪು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com