ಎನ್ ಡಿ ತಿವಾರಿಗೆ ಬ್ರೇನ್ ಸ್ಟ್ರೋಕ್, ಆಸ್ಪತ್ರೆಗೆ ದಾಖಲು: ಪುತ್ರ

ಮಾಜಿ ಕೇಂದ್ರ ಸಚಿವ ಎನ್ ಡಿ ತಿವಾರಿ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಎನ್ ಡಿ ತಿವಾರಿ
ಎನ್ ಡಿ ತಿವಾರಿ
ನವದೆಹಲಿ: ಮಾಜಿ ಕೇಂದ್ರ ಸಚಿವ ಎನ್ ಡಿ ತಿವಾರಿ ಅವರಿಗೆ ಬ್ರೇನ್ ಸ್ಟ್ರೋಕ್(ಮಿದುಳಿಗೆ ಪಾರ್ಶ್ವವಾಯು) ಆಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬುಧವಾರ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಅವರು ಹೇಳಿದ್ದಾರೆ.
ಸಾಕೇತ್ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆ ಮೂಲಗಳ ಪ್ರಕಾರ, 91 ವರ್ಷದ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ಮುಖ್ಯಮಂತ್ರಿ ಎನ್ ಡಿ ತಿವಾರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮ ತಂದೆ ಇಂದು ಬೆಳಗ್ಗೆ ಮನೆಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೋಹಿತ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com