ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ಇಲ್ಲ: ವಿಶ್ವಸಂಸ್ಥೆಯಲ್ಲಿ ಉಲ್ಟಾ ಹೊಡೆದ ಪಾಕಿಸ್ತಾನದ ಪರಮಾಪ್ತ ಚೀನಾ!

Published On :
ಬೀಜಿಂಗ್: ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ವಿಶ್ವಸಂಸ್ಥೆಯಲ್ಲಿ ಸ್ಪಷ್ಟಪಡಿಸಿದ್ದು, ಪಾಕಿಸ್ತಾನ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ.
ಚೀನಾದ ಈ ಹೇಳಿಕೆಯಿಂದ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆಯುಂಟಾಗಿದೆ. ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನಿರ್ಣಯವನ್ನು ಜಾರಿಗೊಳಿಸಬೇಕೆಂದು ಇತ್ತೀಚೆಗಷ್ಟೇ ಒಐಸಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿತ್ತು. ಐಒಸಿ ಕರೆಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಇಲಾಖೆ ಕಾಶ್ಮೀರ ವಿವಾದವನ್ನು ದ್ವಿಪಕ್ಷೀಯವಾಗಿಯೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದೆ.
ಕಾಶ್ಮೀರದ ವಿಷಯದಲ್ಲಿ ಚೀನಾ ನಿಲುವು ಸ್ಪಷ್ಟವಾಗಿದ್ದು ಭಾರತ-ಪಾಕಿಸ್ತಾನವೇ ದ್ವಿಪಕ್ಷೀಯವಾಗಿ ವಿವಾದವನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಚೀನಾ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


