ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವಧಿ 1 ವರ್ಷ ವಿಸ್ತರಣೆ: ಅರುಣ್ ಜೇಟ್ಲಿ

ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರ ಅಧಿಕಾರಾವಧಿಯನ್ನು ಒಂದು ವರ್ಷಗಳ ವರೆಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ (ಸಂಗ್ರಹ ಚಿತ್ರ)
ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ (ಸಂಗ್ರಹ ಚಿತ್ರ)
ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರ ಅಧಿಕಾರಾವಧಿಯನ್ನು ಒಂದು ವರ್ಷಗಳ ವರೆಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ  ಹೇಳಿದ್ದಾರೆ.<ಯdiv>
ದೆಹಲಿಯಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅರುಣ್ ಜೇಟ್ಲಿ, ಸುಬ್ರಮಣಿಯನ್ ಅವರ ಅಧಿಕಾರಾವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿ ಬಳಿಕ ಆಂದರೆ 2014ರ ಅಕ್ಟೋಬರ್ ನಲ್ಲಿ ಅರವಿಂದ್ ಸುಬ್ರಮಣಿಯನ್ ಅವರನ್ನು ಕೇಂದ್ರ ಸರ್ಕಾರ ವಿತ್ತ ಇಲಾಖೆಯ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಿತ್ತು. ಅವರಿಗೆ  ಮೂರು ವರ್ಷಗಳ ಅಧಿಕಾರವಧಿ ಇದ್ದು, ಅವರ ಅಧಿಕಾರಾವಧಿ 2016ರ ಅಕ್ಟೋಬರ್ 2017ಕ್ಕೆ ಕೊನೆಗೊಳ್ಳಬೇಕಿತ್ತು. ಇದೀಗ ಕೇಂದ್ರ ಸರ್ಕಾರ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಿದ್ದು, 2018ರ ಆಕ್ಟೋಬರ್  ವರೆಗೂ ಅವರು ವಿತ್ತ ಇಲಾಖೆಯ ಆರ್ಥಿಕ ಸಲಹೆಗಾರಾಗಿ ಮುಂದುವರೆಯಲಿದ್ದಾರೆ.

ಸಾಮಾನ್ಯವಾಗಿ ಸರ್ಕಾರದ ಆರ್ಥಿಕ ಸಲಹೆಗಾರರು, ಆರ್ಥಿಕ ವಿಚಾರಗಳಲ್ಲಿ ವಿತ್ತ ಸಚಿವರ ಸಲಹೆಗಾಗಿ ನೇಮಕಗೊಂಡಿರುತ್ತಾರೆ. ದೇಶದ ಆರ್ಥಿಕ ನೀತಿಗಳಲ್ಲಿ. ಯೋಜನೆ ರೂಪಿಸುವುದರಲ್ಲಿ, ಮಧ್ಯಂತರ ವರ್ಷದ ಆರ್ಥಿಕ ವಿಷ್ಲೇಷಣೆ ರಚಿಸುವುದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.

ದೆಹಲಿಯ ಸೆಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದ ಅರವಿಂದ್ ಸುಬ್ರಮಣಿಯನ್ ಅವರು, ಬಳಿಕ ಅಹ್ಮದಾಬಾದ್ ನಲ್ಲಿರುವ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸಂಸ್ಥೆಯಲ್ಲಿ ಎಂಬಿಎ ಪದವಿ ಪಡೆದಿದ್ದರು.  ಬಳಿಕ ಬ್ರಿಟನ್ ನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಎಂಫಿಲ್ ಮತ್ತು ಡಿಫಿಲ್ ಪಡೆದಿದ್ದರು.
<ಯdiv>

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com