ಗುರ್ಮಿತ್ ಜೈಲು ಶಿಕ್ಷೆ ಪ್ರಕಟದ ವೇಳೆ ಹನಿಪ್ರೀತ್ ನಮ್ಮ ಮನೆಯಲ್ಲಿದ್ದಳು: ಸಂಬಂಧಿಕರು

ಅತ್ಯಾಚಾರ ಪ್ರಕರಣದಲ್ಲಿ ಸಂಬಂಧ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್'ಗೆ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟ ಮಾಡುತ್ತಿದ್ದ ವೇಳೆ ಹನಿಪ್ರೀತ್ ಸಂಬಂಧಿಕರ ಮನೆಯಲ್ಲಿ ತಂಗಿದ್ದಳು ಎಂಬ ಮಾಹಿತಿ...
ಗುರ್ಮಿತ್ ರಾಮ್ ರಹೀಮ್ ಸಿಂಗ್ ಮತ್ತು ಹನಿಪ್ರೀತ್
ಗುರ್ಮಿತ್ ರಾಮ್ ರಹೀಮ್ ಸಿಂಗ್ ಮತ್ತು ಹನಿಪ್ರೀತ್
ರೊಹ್ಟಕ್; ಅತ್ಯಾಚಾರ ಪ್ರಕರಣದಲ್ಲಿ ಸಂಬಂಧ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್'ಗೆ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟ ಮಾಡುತ್ತಿದ್ದ ವೇಳೆ ಹನಿಪ್ರೀತ್ ಸಂಬಂಧಿಕರ ಮನೆಯಲ್ಲಿ ತಂಗಿದ್ದಳು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. 
ಗುರ್ಮಿತ್ ಬಂಧನದ ವೇಳೆ ಆತನನ್ನು ಅಪಹರಣ ಮಾಡಲು ಸಂಚು ರೂಪಿಸಿದ್ದ ಪ್ರಕರಣ ಸಂಬಂಧ ಹನಿಪ್ರೀತ್ ಗಾಗಿ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಹನಿಪ್ರೀತ್ ತಲೆಮರೆಸಿಕೊಂಡು ಈ ವರೆಗೂ 1 ತಿಂಗಳು ಕಳೆಯುತ್ತಿದ್ದು, ಈ ವರೆಗೂ ಆಕೆ ಎಲ್ಲಿದ್ದಾಳೆಂಬ ಸುಳಿವುಗಳು ಪತ್ತೆಯಾಗಿಲ್ಲ. 
2 ಅತ್ಯಾಚಾರ ಪ್ರಕರಣ ಸಂಬಂಧ ಆ.28ರಂದು ಗುರ್ಮಿತ್ ಗೆ ಜೈಲು ಶಿಕ್ಷೆ ಪ್ರಕಟವಾದ ಬಳಿಕ ಹನಿಪ್ರೀತ್ ರಾಜಸ್ತಾನದ ಹನುಮಾನ್ ಘಡದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಳು. ಅಂದು ರಾತ್ರಿ ಅದೇ ಮನೆಯಲ್ಲಿ ಹನಿಪ್ರೀತ್ ತಂಗಿದ್ದಳು. ಮರುದಿನ ಅಲ್ಲಿಂದ ಹನಿಪ್ರೀತ್ ತೆರಳಿದ್ದಲು ಎಂದು ಆಕೆಯ ಸಂಬಂಧಿಕರು ಹೇಳಿಕೊಂಡಿದ್ದಾರೆ. 
ಹನಿಪ್ರೀತ್ ನನ್ನ ಸೊಸೆ, ಆಕೆ ಆ.28 ರಂದು ನಮ್ಮ ಹನುಮಾನ್'ಘಡದ ಮನೆಯಲ್ಲಿ ಉಳಿದಿದ್ದಳು. ಆ.29 ರ ಬೆಳಿಗ್ಗೆ ಹೊರಟು ಹೋಗಿದ್ದಳು. ಮನೆಗೆ ಬಂದ ಬಳಿಕ ರಾತ್ರಿ ಊಟ ಕೂಡ ಮಾಡಿಲಿಲ್ಲ. ರಾತ್ರಿಯಿಡೀ ಚಿಂತೆಯಲ್ಲಿದ್ದಳು. ಅಳುತ್ತಿದ್ದಳು ಎಂದು ತಿಳಿಸಿದ್ದಾರೆ. 
ಅತ್ಯಾಚಾರ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ಸಾಬೀತಾದ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ವೇಳೆ ಗುರ್ಮಿತ್ ಬೆಂಬಲಿಗರು ಪಂಚಕುಲದಲ್ಲಿ ಹಿಂಸಾಚಾರ ನಡೆಸಿದ್ದರು. ಪರಿಣಾಮ 41 ಮಂದಿ ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಗುರ್ಮಿತ್ ಬಂಧನದ ವೇಳೆ ಆತನನ್ನು ಅಪಹರಣ ಮಾಡಲು ಡೇರಾ ಗೂಂಡಾಗಳು ಯೋಜನೆ ರೂಪಿಸಿದ್ದರು. ಈ ಯೋಜನೆಯಲ್ಲಿ ಹನಿಪ್ರೀತ್ ಕೈವಾಡ ಕೂಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1 ರಂದು ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದಾದ ಬಳಿಕ ಹನಿಪ್ರೀತ್ ತಲೆಮರೆಸಿಕೊಂಡಿದ್ದಾಳೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com