ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಶಬ್ಬೀರ್ ಶಾ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದ್ದು, ಮುಂಬೈ ದಾಳಿಯ ರೂವಾರಿ, ಜಮಾತ್ ಉದ್ ದಾವಾ(ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಜತೆಗೆ ಶಬ್ಬೀರ್ ಶಾ ಸಂಪರ್ಕ ಹೊಂದಿರುವುದಾಗಿ ಆರೋಪಿಸಿದ್ದಾರೆ.