ಡೊಕ್ಲಮ್ ವಿವಾದ ಮೀರಿ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಭಾರತದೊಂದಿಗೆ ಕೆಲಸ ಮಾಡುತ್ತಿದ್ದೇವೆ: ಚೀನಾ

ಡೊಕ್ಲಮ್ ವಿವಾದವನ್ನು ಮೀರಿ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಭಾರತ-ಚೀನಾ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಚೀನಾದ ಕೌನ್ಸಲ್....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಲ್ಕತಾ: ಡೊಕ್ಲಮ್ ವಿವಾದವನ್ನು ಮೀರಿ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಭಾರತ-ಚೀನಾ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಚೀನಾದ ಕೌನ್ಸಲ್ ಜನರಲ್ ಅವರು ಶುಕ್ರವಾರ ಹೇಳಿದ್ದಾರೆ.
ಪರಸ್ಪರ ಸಹಕಾರ ಮತ್ತು ವೀನಿಮಯದ ಮೂಲಕ ಭಾರತ-ಪಾಕಿಸ್ತಾನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಚೀನಾ ಕೌನ್ಸಲ್ ಜನರಲ್ ಮಾ ಝನ್ವು ಅವರು ತಿಳಿಸಿದ್ದಾರೆ.
ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಕಳೆದ ಸೆಪ್ಟೆಂಬರ್ 5ರಂದು ಸಭೆ ನಡೆಸಿ ಉಭಯ ದೇಶಗಳ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ ಎಂದು ಝನ್ವು ಅವರು ಹೇಳಿದ್ದಾರೆ.
ಇದೇ ವೇಳೆ, ಎರಡೂ ದೇಶಗಳು ಡೊಕ್ಲಮ್ ವಿವಾದವನ್ನು ಮೀರಿ ಮುಂದು ಸಾಗುತ್ತವೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು. ಆ ವಿವಾದಕ್ಕೆ ಈಗ ನಾವು ಹೆಚ್ಚು ಮಹತ್ವ ನೀಡುವುದಿಲ್ಲ. ಅದನ್ನು ಮೀರಿ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಶ್ರಮಿಸಲಾಗುವುದು ಎಂದಿದ್ದಾರೆ. 
ನಿನ್ನೆಯಷ್ಟೇ ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ವಿಶ್ವಸಂಸ್ಥೆಯಲ್ಲಿ ಸ್ಪಷ್ಟಪಡಿಸಿದ್ದು, ದ್ವಿಪಕ್ಷೀಯ ಮಾತುಕತೆ ಮೂಲಕವೇ ಪಾಕಿಸ್ತಾನ ಭಾರತದೊಂದಿಗೆ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com