ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಪ್ರಾರಂಭ

ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೆ.24 ರಂದು ನವದೆಹಲಿಯಲ್ಲಿ ಪ್ರಾರಂಭವಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ.
ಬಿಜೆಪಿ
ಬಿಜೆಪಿ
Updated on
ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೆ.24 ರಂದು ನವದೆಹಲಿಯಲ್ಲಿ ಪ್ರಾರಂಭವಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ. 
ಮುಂಬರುವ ವಿಧಾನಸಭಾ ಚುನಾವಣೆ, ದೇಶದ ಆರ್ಥಿಕ ಬೆಳವಣಿಗೆ ಸೇರಿದಂತೆ ಹಲವು ಪ್ರಮುಖ ವಿಷಯಗಳು ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಗೆ ಬರಲಿವೆ. ಬಿಜೆಪಿಯ 15 ಮುಖ್ಯಮಂತ್ರಿಗಳು, 6 ಉಪಮುಖ್ಯಮಂತ್ರಿಗಳು, 1,400 ಶಾಸಕರು, 85 ವಿಧಾನಪರಿಷತ್ ಸದಸ್ಯರು, 280 ಸಚಿವರು 336 ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ. 
ಸೆ.25 ರಂದು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ. ಈ ವೇಳೆ ರಾಜ್ಯ ಬಿಜೆಪಿಯಿಂದ ಎಲ್ಲಾ ಪದಾಧಿಕಾರಿಗಳೂ ಭಾಗಿಯಾಗಿರಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com