ಡಾರ್ಜಿಲಿಂಗ್ ಹಿಲ್ಸ್ ನಲ್ಲಿ ಮತ್ತೆ ಹಿಂಸಾಚಾರ, ಕಾರಿಗೆ ಬೆಂಕಿ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಿಲ್ಸ್ ನಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದೆ.
ಪಶ್ಚಿಮ ಬಂಗಾಳ
ಪಶ್ಚಿಮ ಬಂಗಾಳ
Updated on
ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಿಲ್ಸ್ ನಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದೆ. 
ಗೋರ್ಖಾ ಜನಮುಕ್ತಿ ಮೋರ್ಚ(ಜಿಜೆಎಂ) ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದಾರೆಂಬ ಶಂಕೆ ಇದೆ. ಡಾರ್ಜಿಲಿಂಗ್ ನಿಂದ ಲೆಬಾಂಗ್ ಗೆ ತೆರಳುತ್ತಿದ್ದ ಕಾರನ್ನು ತಡೆದು, ಹಾನಿಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ ಎಂದು ಎಸ್ ಪಿ ಅಖಿಲೇಶ್ ಕುಮಾರ್ ಚತುರ್ವೇದಿ ಹೇಳಿದ್ದಾರೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com