ಕಾರ್ತಿ ಚಿದಂಬರಂಗೆ ಸೇರಿದ 1.16 ಕೋಟಿ ರು. ಮೌಲ್ಯದ ಆಸ್ತಿ ಜಪ್ತಿ

ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ....
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ ಸುಮಾರು 1.16 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಸೋಮವಾರ ಜಾರಿ ನಿರ್ದೇಶನಾಲಯ(ಇಡಿ)ತಿಳಿಸಿದೆ.
ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಿಕ್ ಬ್ಯಾಕ್ ಪಡೆದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರು ವಿದೇಶದಲ್ಲಿರುವ ತಮ್ಮ ಹಲವು ಬ್ಯಾಂಕ್ ಖಾತೆಗಳನ್ನು ಕ್ಲೋಸ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಯ ಬ್ಯಾಂಕ್ ಖಾತೆ ಹಾಗೂ 90 ಲಕ್ಷ ಮೌಲ್ಯದ ಎಫ್ ಡಿಗಳನ್ನು ಜಪ್ತಿ ಮಾಡಿರುವುದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಕಾರ್ತಿ ಚಿದಂಬರಂ ಅವರ ಬ್ಯಾಂಕ್ ಖಾತೆ ಹಾಗೂ ಎಫ್ ಡಿಯನ್ನು ಜಪ್ತಿ ಮಾಡಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ ತನಿಖೆ ವೇಳೆ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಎಫ್ಐಪಿಬಿ (ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ) ಅನುಮತಿ ನೀಡಿರುವುದು ಪತ್ತೆಯಾಗಿದೆ ಎಂದಿದ್ದಾರೆ. 
ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ (ASCPL) ಹೆಸರಿನಲ್ಲಿದ್ದ 26 ಲಕ್ಷ ರುಪಾಯಿ ಮೌಲ್ಯದ ಎಫ್ ಡಿಯನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿದಂಬರಂ ಅವರು ಏರ್ಸೆಲ್ ನ ಷೇರುಗಳಲ್ಲಿ ಶೇ.74ರ ಬದಲಿಗೆ ಶೇ.100ರಷ್ಟು ಹೂಡಿಕೆಗೆ ಮಲೇಷ್ಯಾದ ಮ್ಯಾಕ್ಸಿಸ್‌ಗೆ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಚಿದಂಬರಂ ಅವರ ಪುತ್ರ ಕಾರ್ತಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com