ಸಂಗ್ರಹ ಚಿತ್ರ
ದೇಶ
ಎಚ್ಚರ.. ಮೊಬೈಲ್ ನ ಐಎಂಇಐ ಸಂಖ್ಯೆ ತಿರುಚಿದರೆ 3 ವರ್ಷ ಜೈಲು, ದಂಡ!
ಹೆಚ್ಚುತ್ತಿರುವ ಮೊಬೈಲ್ ಕಳವು ಹಾಗೂ ಮೊಬೈಲ್ ದುರ್ಬಳಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿರುವ ಕೇಂದ್ರ ಸರ್ಕಾರ, ಮೊಬೈಲ್ ನ ವಿಶಿಷ್ಟ ಗುರುತಿನ ಐಎಂಇಐ ಸಂಖ್ಯೆಯನ್ನು ತಿರುಚುವುದನ್ನು ಗಂಭೀರ ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸಿದೆ.
ನವದೆಹಲಿ: ಹೆಚ್ಚುತ್ತಿರುವ ಮೊಬೈಲ್ ಕಳವು ಹಾಗೂ ಮೊಬೈಲ್ ದುರ್ಬಳಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿರುವ ಕೇಂದ್ರ ಸರ್ಕಾರ, ಮೊಬೈಲ್ ನ ವಿಶಿಷ್ಟ ಗುರುತಿನ ಐಎಂಇಐ ಸಂಖ್ಯೆಯನ್ನು ತಿರುಚುವುದನ್ನು ಗಂಭೀರ ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸಿದೆ.
ಮೊಬೈಲ್ ಕಳ್ಳತನ ಮಾಡಿದ ಬಳಿಕ ಖದೀಮರು ಅದರ ಐಎಂಇಐ ಸಂಖ್ಯೆಯನ್ನು ತಿರುಚುವ ಮೂಲಕ ಆ ಮೊಬೈಲ್ ಫೋನ್ ಮೇಲೆ ತನಿಖಾ ಸಂಸ್ಥೆಗಳು ನಿಗಾ ಇಡದಂತೆ ಮಾಡುತ್ತಿದ್ದಾರೆ. ಇಂತಹ ದುಷ್ಕರ್ಮಿಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ದೂರ ಸಂಪರ್ಕ ಇಲಾಖೆ ಆಗಸ್ಟ್ 25ರಂದು ಅಧಿಸೂಚನೆ ಯೊಂದನ್ನು ಹೊರಡಿಸಿದ್ದು, ಅದರನ್ವಯ ಪ್ರತಿ ಮೊಬೈಲ್ ಫೋನ್'ಗೂ ಇರುವ 15 ಅಂಕೆಗಳ ವಿಶಿಷ್ಟ ‘ಐಎಂಇಐ ಸಂಖ್ಯೆ’ ತಿರುಚುವವರಿಗೆ ಗರಿಷ್ಠ 3 ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಿದೆ.
ಹೀಗಾಗಿ ಮೊಬೈಲ್ ತಯಾರಕರನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿ ಐಎಂಇಐ ಸಂಖ್ಯೆಯನ್ನು ಅಳಿಸುವುದು, ನಾಶಪಡಿಸುವುದು, ಬದಲಾವಣೆ ಮಾಡುವುದು ಅಕ್ರಮ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಂತೆಯೇ ತಿರುಚಲ್ಪಟ್ಟ ಐಎಂಇಐ ಸಂಖ್ಯೆಯನ್ನು ಹೊಂದಿರುವ ಮೊಬೈಲ್ ಅನ್ನೂ ಕೂಡ ಬಳಕೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದು, ಐಎಂಇಐ ಸಂಖ್ಯೆ ಅಕ್ರಮವಾಗಿ ತಿರುಚಲ್ಪಟ್ಟಿರುವುದು ಗೊತ್ತಿದ್ದರೆ ಯಾವುದೇ ವ್ಯಕ್ತಿ ಅಂತಹ ಮೊಬೈಲ್ ಬಳಸಕೂಡದು ಎಂದು ‘ಮೊಬೈಲ್ ಉಪಕರಣದ ಗುರುತಿನ ಸಂಖ್ಯೆ ತಿರುಚುವುದನ್ನು ತಡೆಯುವ ನಿಯಮ- 2017’ ಹೇಳುತ್ತದೆ.
ಸಿಮ್ ಬದಲಾವಣೆ ಮಾಡುವ ಮೂಲಕ ಮೊಬೈಲ್ ಸಂಖ್ಯೆ ಬದಲಿಸಬಹುದು. ಆದರೆ ಐಎಂಇಐ ಸಂಖ್ಯೆಯನ್ನು ತಂತ್ರಜ್ಞಾನದಲ್ಲಿ ನಿಪುಣನಾದ ವ್ಯಕ್ತಿ ವಿಶೇಷ ಉಪಕರಣಗಳಿಂದ ಮಾತ್ರ ಬದಲಿಸಬಹುದಾಗಿದೆ.
ಪ್ರತಿ ಮೊಬೈಲ್ ಗಳಿಗೂ ಜಿಎಸ್‌ಎಂಎ ಎಂಬ ಜಾಗತಿಕ ಸಂಸ್ಥೆ ಹಾಗೂ ಅದರಿಂದ ಮಾನ್ಯತೆ ಪಡೆದ ಸಂಸ್ಥೆಗಳು ಐಎಂಇಐ ಸಂಖ್ಯೆಯನ್ನು ಮಂಜೂರು ಮಾಡುತ್ತವೆ. ಒಂದು ವೇಳೆ ಮೊಬೈಲ್ ಕಳೆದು ಹೋದರೆ, ಅದನ್ನು ಪತ್ತೆ ಹಚ್ಚಲು ಈ ಸಂಖ್ಯೆ ನೆರವಾಗುತ್ತದೆ. ಇದೇ ಕಾರಣಕ್ಕೆ ಮೊಬೈಲ್ ಗಳಿಗೆ ಈ ವಿಶಿಷ್ಟ ಸಂಖ್ಯೆ ಅತ್ಯವಶ್ಯಕವಾಗಿದ್ದು, ಇತ್ತೀಚಿನ ದಿನಗಳಲ್ಲಿ ಖದೀಮರು ಆ ಸಂಖ್ಯೆಯನ್ನೇ ತಿರುಚಿ, ಬೇರೊಂದು ಸಂಖ್ಯೆಯನ್ನು ನಿಗದಿ ಮಾಡಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಇದರಿಂದ ಕಳವಾದ ಮೊಬೈಲ್ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಅಲ್ಲದೆ ಹೀಗೆ ಕಳವಾಗಿ ವಿಶಿಷ್ಟ ಸಂಖ್ಯೆ ತಿರುಚಲ್ಪಟ್ಟ ಮೊಬೈಲ್ ಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಇದು ಹಲವು ಪ್ರಕರಣಗಳಲ್ಲಿ ಸಾಬೀತಾಗಿದೆ.
ಮೂಲಗಳ ಪ್ರಕಾರ ಒಂದೇ ಐಎಂಇಐ ಸಂಖ್ಯೆ ಹೊಂದಿದ 15 ಸಾವಿರ ಮೊಬೈಲ್ ಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಮಾಹಿತಿಯನ್ನು ದೂರಸಂಪರ್ಕ ಜಾರಿ ಸಂಪನ್ಮೂಲ ಹಾಗೂ ನಿಗಾ ಕೋಶ ಪತ್ತೆ ಹಚ್ಚಿದೆ.

Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ