ಗುಜರಾಜ್ ಚುನಾವಣೆ: ರಾಹುಲ್ ಪ್ರಚಾರದಿಂದ ಯಾವುದೇ ಪ್ರಯೋಜನವಿಲ್ಲ- ಸುಬ್ರಮಣಿಯನ್ ಸ್ವಾಮಿ

ಗುಜರಾತ್ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರಚಾರ ಕಾರ್ಯಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
Updated on: 
ನವದೆಹಲಿ: ಗುಜರಾತ್ ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರಚಾರ ಕಾರ್ಯಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. 
ಗುಜರಾತ್ ರಾಜ್ಯ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇಂದಿನಿಂದ ಗುಜರಾತ್ ನಲ್ಲಿ ಪ್ರಚಾರ ಕಾರ್ಯಗಳನ್ನು ಆರಂಭಿಸುತ್ತಿದ್ದಾರೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಾವುದೇ ಸ್ಥಳದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿ. ಇದರಿಂದ ಯಾವುದೇ ಬದಲಾವಣೆಗಳಾಗುವುದಿಲ್ಲ. ಪ್ರಚಾರಗಳಿಂದ ಅತೀ ದೊಡ್ಡ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ತನಗೆ ಬರುವ ಮತ್ತಷ್ಟು ಮತಗಳನ್ನೂ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ. 
ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು ಖಚಿತ. ಇದರ ವಿಶ್ವಾಸ ನನಗಿದೆ, ಪ್ರಚಾರಗಳು ರಾಹುಲ್'ಗೆ ಯಾವುದೇ ಸಹಾಯವನ್ನೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com