ನವದೆಹಲಿ: ಉತ್ತರ ದೆಹಲಿಯ ತಿಮಾರ್ಪುರ್ ಪ್ರದೇಶದಲ್ಲಿ ಮಹಿಳೆಯರಿಬ್ಬರನ್ನು ಚೂರಿ ಇರಿದು ಹತ್ಯೆ ಮಾಡಲಾಗಿದೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು 22 ಮತ್ತು 24 ವರ್ಷದ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ. ಇವರಿಬ್ಬರ ಪೈಕಿ ಓರ್ವ ಮಹಿಳೆಯೊಬ್ಬಳ ಪತಿ ಘಟನೆ ನಂತರ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.