ಭ್ರಷ್ಟಾಚಾರ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ತೇಜಸ್ವಿ

2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ತೇಜಸ್ವಿ ಯಾದವ್
ತೇಜಸ್ವಿ ಯಾದವ್
ನವದೆಹಲಿ: 2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್‍(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೋರಿದ್ದಾರೆ. 
2006ರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಹೊಟೇಲ್ ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಸಿಬಿಐ ಲಾಲೂ ಪ್ರಸಾದ್, ಪತ್ನಿ ರಾಬ್ರಿದೇವಿ ಹಾಗೂ ತೇಜಸ್ವಿ ಯಾದವ್ ವಿರುದ್ಧ ದೂರು ದಾಖಲಿಸಿತ್ತು. 
ಈ ಸಂಬಂಧ ಲಾಲೂ ನಿವಾಸ, ದೆಹಲಿ, ಪಾಟ್ನಾ ಗುರುಗಾಂವ್ ಸೇರಿದಂತೆ ಒಟ್ಟು 12 ಕಡೆ ಸಿಬಿಐ ಜೂನ್ ನಲ್ಲಿ ದಾಳಿ ನಡೆಸಿತ್ತು. ಅಲ್ಲದೆ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಗೆ 15 ದಿನಗಳ ಹೆಚ್ಚು ಕಾಲಾವಕಾಶ ನೀಡುವಂತೆ ಕೋರಿದ್ದಾರೆ. 
ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್ ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬುವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು ಅದಕ್ಕೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com