ನಿರೀಕ್ಷಣಾ ಜಾಮೀನು ಕೋರಿ ದೆಹಲಿ 'ಹೈ' ಮೆಟ್ಟಿಲೇರಿದ ಹನಿಪ್ರೀತ್ ಇನ್ಸಾನ್

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ನಿರೀಕ್ಷಿತ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...
ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್  ಹಾಗೂ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್
ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಹಾಗೂ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ನಿರೀಕ್ಷಿತ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ನಿರೀಕ್ಷಣಾ ಜಾಮೀನು ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹನಿಪ್ರೀತ್ ಪರ ವಕೀಲ ಪ್ರದೀಪ್ ಆರ್ಯ, ನಿರೀಕ್ಷಣಾ ಜಾಮೀನು ಅರ್ಜಿಗೆ ಸಹಿ ಹಾಕಲು ದೆಹಲಿಯ ಲಜಪತ್ ನಗರದಲ್ಲಿರುವ ಕಚೇರಿಗೆ ಹನಿಪ್ರೀತ್ ಬಂದಿದ್ದರು. ಅಲ್ಲದೆ, ಆಕೆ ತಮ್ಮ ಜೊತೆಗೆ ಸಂಪರ್ಕದಲ್ಲಿದ್ದಾರೆ. ಇಂದು ದೆಹಲಿ ನ್ಯಾಯಾಲಯದಲ್ಲಿ ಹನಿಪ್ರೀತ್ ಪರವಾಗಿ ಜಾಮೀನು ಅರ್ಜಿ ಸಲ್ಲಿಸುತ್ತೇನೆಂದು ಹೇಳಿದ್ದಾರೆ. 
ಅತ್ಯಾಚಾರ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ಸಾಬೀತಾದ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ವೇಳೆ ಗುರ್ಮಿತ್ ಬೆಂಬಲಿಗರು ಪಂಚಕುಲದಲ್ಲಿ ಹಿಂಸಾಚಾರ ನಡೆಸಿದ್ದರು. ಪರಿಣಾಮ 41 ಮಂದಿ ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 
ಗುರ್ಮಿತ್ ಬಂಧನದ ವೇಳೆ ಆತನನ್ನು ಅಪಹರಣ ಮಾಡಲು ಡೇರಾ ಗೂಂಡಾಗಳು ಯೋಜನೆ ರೂಪಿಸಿದ್ದರು. ಈ ಯೋಜನೆಯಲ್ಲಿ ಹನಿಪ್ರೀತ್ ಕೈವಾಡ ಕೂಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1 ರಂದು ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇದಾದ ಬಳಿಕ ಹನಿಪ್ರೀತ್ ತಲೆಮರೆಸಿಕೊಂಡಿದ್ದಾಳೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com