ಇಶ್ರತ್ ಜಹಾನ್ ಪ್ರಕರಣ ಸಿಬಿಐ ತನಿಖೆಗೆ ಆದೇಶಿಸಿದ್ದ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ

ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ...
ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್
ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್
ಬೆಂಗಳೂರು: ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ. 
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ರಾಷ್ಟ್ರಪತಿಯವರಿಗೆ ನಿನ್ನೆ ಮಧ್ಯಾಹ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆಂದು ಹೈಕೋರ್ಟ್ ಮೂಲಗಳು ತಿಳಿಸಿವೆ. 
ಗುಜರಾತ್ ಹೈಕೋರ್ಟ್ ನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಯಂತ್ ಪಟೇಲ್ ಅವರನ್ನು 2016ರ ಫೆಬ್ರವರಿ 13 ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿತ್ತು. 

ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿಯವರ ಬಳಿಕ ಎರಡನೇ ಸ್ಥಾನದಲ್ಲಿದ್ದ ಜಯಂತ್ ಪಟೇಲ್ ಅವರು 2018ರ ಆಗಸ್ಟ್ 3 ರಂದು ನಿವೃತ್ತಿಯಾಗಬೇಕಿತ್ತು. 1979ರಲ್ಲಿ ಗುಜರಾತ್'ನ ರಾಜ್'ಕೋಟ್'ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ್ದ ಅವರು 2001ರ ಡಿ.3 ರಂದು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. 

2004ರ ಆಗಸ್ಟ್ 9 ರಂದು ಪೂರ್ಣಾವಧಿ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದರು. ಈ ಹಿಂದೆ ರಾಜ್ಯದಲ್ಲಿ ತಮಗಿಂತ ಕಿರಿಯ ನ್ಯಾಯಮೂರ್ತಿಯೊಬ್ಬರಿಗೆ ಸುಪ್ರೀಂಕೋರ್ಟ್ ಗೆ ಬಡ್ತಿ ನೀಡಿದ್ದ ಕ್ರಮ ಪ್ರತಿಭಟಿಸಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಂ.ಎಲ್ ಪೆಡ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಹೈಕೋರ್ಟ್ ನ ಹಿರಿಯ ವಕೀಲರೊಬ್ಬರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com