ಹೊಟೇಲ್ ಗುತ್ತಿಗೆಯಲ್ಲಿ ಅಕ್ರಮ ಆರೋಪ: ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ, ತೇಜಸ್ವಿ ಯಾದವ್ ಗೆ ಇಡಿ ಸಮನ್ಸ್

2006ರ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(ಐಆರ್ ಸಿಟಿಸಿ) ....
ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ
ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ
ನವದೆಹಲಿ: 2006ರ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(ಐಆರ್ ಸಿಟಿಸಿ) ಹೊಟೇಲ್ ಗಳ ಗುತ್ತಿಗೆ ಕೇಸಿಗೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಗೆ ಜಾರಿ ನಿರ್ದೇಶನಾಲಯ ಹೊಸ ಸಮ್ಮನ್ಸ್ ಜಾರಿ ಮಾಡಿದೆ.
ನಾವು ರಾಬ್ರಿ ದೇವಿ ಮತ್ತು ತೇಜಸ್ವಿ ಯಾದವ್ ಗೆ ಅಕ್ಟೋಬರ್ 10 ಮತ್ತು 11ರಂದು ವಿಚಾರಣೆಗೆ ಹಾಜರಾಗಲು ಹೊಸ ಸಮ್ಮನ್ಸ್ ಜಾರಿ ಮಾಡಿದ್ದೇವೆ ಎಂದು ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಶೆಲ್ ಕಂಪೆನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಲಾಲೂ ಪ್ರಸಾದ್ ಯಾದವ್ ಹಾಗೂ ಇತರ ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕಳೆದ ಜುಲೈ 5 ರಂದು ಸಿಬಿಐ ಕೇಸು ದಾಖಲಿಸಿತ್ತು. ನಂತರ ಅದೇ ತಿಂಗಳು 27ರಂದು ಎಫ್ ಐಆರ್ ದಾಖಲಾಗಿತ್ತು.
2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ, ಲಂಚ ಸ್ವೀಕರಿಸಿ ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ ನಿರ್ವಹಣೆಯ ಗುತ್ತಿಗೆಯನ್ನು ಖಾಸಗಿ ಕಂಪೆನಿಗಳಿಗೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com