ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ; ತೀರ್ಪು ಕಾಯ್ದಿರಿಸಿದ ಕೇರಳ ಹೈಕೋರ್ಟ್

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿಯ ಅಪಹರಣ ಮತ್ತು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕೊಚ್ಚಿ: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಅಭಿನಯಿಸಿರುವ ಖ್ಯಾತ ಮಲೆಯಾಳಂ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ಕೇರಳ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 
ಕಳೆದ ಸೆಪ್ಟೆಂಬರ್ 7ರಂದು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಮಲೆಯಾಳಂ ನಿರ್ದೇಶಕ ನಾದಿರ್ ಶಾ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮತ್ತೊಬ್ಬ ಆರೋಪಿ ಹಾಗೂ ನಾದಿರ್ ಶಾ ಸ್ನೇಹಿತ, ಮಲೆಯಾಳಂ ನಟ ದಿಲೀಪ್ ಅವರನ್ನು ಕಳೆದ ಜುಲೈ 10ರಂದು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇತ್ತೀಚಿಗಷ್ಟೇ ನಾಲ್ಕನೇ ಬಾರಿ ಜಾಮೀನು ಕೋರಿ ನಟ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ಅಂಗಮಲ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಆರೋಪಿ 60 ದಿನ ಜೈಲಿನಲ್ಲಿ ಕಳೆದಿದ್ದರೂ ಕಾನೂನು ಬದ್ಧ ಜಾಮೀನಿಗೆ ಅರ್ಹತೆ ಹೊಂದಿಲ್ಲ ಎಂದು ಹೇಳಿತ್ತು. ಈ ಹಿಂದೆ ಇದೇ ಕೋರ್ಟ್ ಮಲೆಯಾಳಂ ನಟನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಕೇರಳ ಹೈಕೋರ್ಟ್ ಎರಡು ಬಾರಿ ದಿಲೀಪ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣ ಸಂಬಂಧ ನಟ ದಿಲೀಪ್ ಅವರನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com