ಬಿಹೆಚ್'ಯು ಹಿಂಸಾಚಾರದ ಹಿಂದೆ ಪಿತೂರಿಯಿದೆ, ತಪ್ಪಿತಸ್ಥರನ್ನು ಸುಮ್ಮನೆ ಬಿಡಲ್ಲ: ಯೋಗಿ ಆದಿತ್ಯನಾಥ್

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹಿಂದೆ ಪಿತೂರಿಗಳಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ವಾರಣಾಸಿ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಹಿಂದೆ ಪಿತೂರಿಗಳಿದ್ದು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ. 
ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಚಾರದ ಹೊಣೆಹೊತ್ತುಕೊಂಡ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಧಿಕಾರಿ ರಾಜೀನಾಮೆ ಸಲ್ಲಿಸಿದ ಗಂಟೆಗಳ ಬಳಿಕ ಹೇಳಿಕೆ ನೀಡಿರುವ ಯೋಗಿ ಆದಿತ್ಯನಾಥ್ ಅವರು, ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದಿರುವ ಪ್ರಾಥಮಿಕ ತನಿಖಾ ವರದಿಯಲ್ಲಿ ಕೆಲ ಸಮಾಜಘಾತುಕ ಶಕ್ತಿಗಳ ಕೈವಾಡವಿರುವುದಾಗಿ ತಿಳಿದುಬಂದಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಅರಾಜತಕತೆ ಸೃಷ್ಟಿಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಪ್ರಕರಣ ಕುರಿತಂತೆ ಮೋದಿಯವರು ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 
ಸ್ವತಃ ಪ್ರಧಾನಮಂತ್ರಿಗಳೇ ಸ್ಥಳದಲ್ಲಿದ್ದರೂ ವಿದ್ಯಾರ್ಥಿಗಳೇಕೆ ಪ್ರತಿಭಟನೆ ನಡೆಸುತ್ತಿದ್ದಾರೆಂದು ವಿಚಾರಣೆ ನಡೆಸಿಲ್ಲ. ಹೀಗಾಗಿ ಮೋದಿಯವರೂ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com