ಆಧಾರ್ ಪಡೆಯುವ ಅವಧಿ 3 ತಿಂಗಳು ವಿಸ್ತರಣೆ

ಸರ್ಕಾರಿ ಯೋಜನೆಗಳು ಹಾಗೂ ಸಬ್ಸಿಡಿಗಳಿಗೆ ಆಧಾರ್ ಕಾರ್ಡ್ ಪಡೆಯಲು ಡಿ.31ರವರೆಗೆ 3 ತಿಂಗಳ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧಾರ ಕೈಗೊಂಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಸರ್ಕಾರಿ ಯೋಜನೆಗಳು ಹಾಗೂ ಸಬ್ಸಿಡಿಗಳಿಗೆ ಆಧಾರ್ ಕಾರ್ಡ್ ಪಡೆಯಲು ಡಿ.31ರವರೆಗೆ 3 ತಿಂಗಳ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ನಿರ್ಧಾರ ಕೈಗೊಂಡಿದೆ. 
ಇನ್ನಷ್ಟೇ ಆಧಾರ್ ಪಡೆಯಬೇಕಾದವರಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. 
ಬಡ ಮಹಿಳೆಯರಿಗ ಉಚಿತ ಅಡುಗೆ ಅನಿಲ, ಸೀಮೆಎಣ್ಣೆ ಮತ್ತು ರಸಗೊಬ್ಬರ ಸಬ್ಸಿಡಿ, ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆ ಮತ್ತು ಎಂಜಿಎನ್ಆರ್'ಇಜಿಎ ಸೇರಿದಂತೆ 35 ಸಚಿವಾಲಯಗಳ 135 ಯೋಜನೆಗಳಿಗೆ ಈ ನಿಯಮ ಅನ್ವಯವಾಗುತ್ತದೆ. ಆಧಾರ್ ಇಲ್ಲದವರು ಸೆ.30 ರೊಳಗೆ ಪಡೆಯುವಂತೆ ಸರ್ಕಾರ ಈ ಹಿಂದೆ ಸೂಚಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com