ಉದ್ದೇಶಿತ ಮೆಟ್ರೊ ಪ್ರಯಾಣ ದರ ಹೆಚ್ಚಳ 'ಜನ ವಿರೋಧಿ': ದೆಹಲಿ ಸಿಎಂ ಕೇಜ್ರಿವಾಲ್

ಉದ್ದೇಶಿತ ಮೆಟ್ರೊ ಪ್ರಯಾಣ ದರ ಹೆಚ್ಚಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು,...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಉದ್ದೇಶಿತ ಮೆಟ್ರೊ ಪ್ರಯಾಣ ದರ ಹೆಚ್ಚಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಜನ ವಿರೋಧಿ ನೀತಿ ಎಂದು ಗುರುವಾರ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ಟೋಬರ್ ನಿಂದ ಮೆಟ್ರೊ ಪ್ರಯಾಣ ಮತ್ತಷ್ಟು ದುಬಾರಿಯಾಗಲಿದ್ದು, ಇದೇ ವರ್ಷದಲ್ಲಿ ಎರಡನೇ ಬಾರಿ ಪ್ರಯಾಣ ದರ ಏರಿಕೆಗೆ ದೆಹಲಿ ಮೆಟ್ರೊ ರೈಲು ನಿಗಮ ಮುಂದಾಗಿದೆ.
ಕಳೆದ ಮೇ ತಿಂಗಳ ದೆಹಲಿಯಲ್ಲಿ ಮೆಟ್ರೊ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಗರಿಷ್ಠ 10 ರುಪಾಯಿ ಹೆಚ್ಚಳ ಮಾಡಲು ಮುಂದಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಸಿಎಂ, ಮೆಟ್ರೊ ಪ್ರಯಾಣ ದರ ಹೆಚ್ಚಳ ಜನ ವಿರೋಧಿ ಎಂದಿದ್ದಾರೆ. ಅಲ್ಲದೆ ದರ ಏರಿಕೆ ತಡೆಯುವುದಕ್ಕೆ ಒಂದು ವಾರದಲ್ಲಿ ಪರಿಹಾರ ಕಂಡುಕೊಳ್ಳುವಂತೆ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com