ಸಂಗ್ರಹ ಚಿತ್ರ
ದೇಶ
ಕಾಬೂಲ್ ವಿಮಾನ ನಿಲ್ದಾಣದ ಮೇಲೆ ರಾಕೆಟ್ ದಾಳಿ: ಸ್ಪೈಸ್ ಜೆಟ್ ದೆಹಲಿ ವಿಮಾನ ಪಾರು
ಆಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಬುಧವಾರ ಉಗ್ರರು ರಾಕೆಟ್ ದಾಳಿ ನಡೆಸಿದ್ದು, ದೆಹಲಿಗೆ ಬರುತ್ತಿದ್ದ ಸ್ಪೈಸ್ ಜೆಟ್ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದೆ...
ನವದೆಹಲಿ: ಆಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಬುಧವಾರ ಉಗ್ರರು ರಾಕೆಟ್ ದಾಳಿ ನಡೆಸಿದ್ದು, ದೆಹಲಿಗೆ ಬರುತ್ತಿದ್ದ ಸ್ಪೈಸ್ ಜೆಟ್ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದೆ.
180 ಜನರಿದ್ದ ಸ್ಪೈಸ್ ಜೆಟ್ ಬೋಯಿಂಗ್ 737 ವಿಮಾನ ಕಾಬೂಲ್ ನಿಂದ ದೆಹಲಿಗೆ ನಿನ್ನೆ ಮುಂಜಾನೆ ಪ್ರಯಾಣ ಬೆಳೆಸಬೇಕಿತ್ತು. ಈ ಸಮಯದಲ್ಲಿ ದಾಳಿ ನಡೆದಿದ್ದು, ವಿಮಾನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.
ದಾಳಿಯಿಂದ ವಿಮಾನಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ. ಅಮೆರಿಕ ರಕ್ಷಣಾ ಸಚಿವ ಜಿಮ್ ಮ್ಯಾಟಿಸ್ ಅವರು ಕಾಬೂಲ್'ಗೆ ಆಗಮಿಸಿದ ಸಂದರ್ಭದಲ್ಲಿಯೇ ಈ ದಾಳಿ ನಡೆದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ