ಡೇರಾ ಸಚಾ ಸೌದಾ ವಿರುದ್ಧ ತನಿಖೆ ಆರಂಭಿಸಿದ ಜಾರಿ ನಿರ್ದೇಶನಾಲಯ

ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಡೇರಾ ...
ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(ಸಂಗ್ರಹ ಚಿತ್ರ)
ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(ಸಂಗ್ರಹ ಚಿತ್ರ)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಡೇರಾ ಸಚಾ ಸೌದಾ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಿದೆ.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನೀಡಿದ ಆದೇಶದ ಪ್ರಕಾರ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಜಾರಿ ನಿರ್ದೇಶನಾಲಯದ ಮೂಲಗಳ ಪ್ರಕಾರ, ದೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿನಿಮಾಗಳಿಗೆ ಖರ್ಚು ಮಾಡಿದ ಹಣದ ಬಗ್ಗೆ ತನಿಖೆ ನಡೆಸಲಾಗುತ್ತದೆ. ಗುರ್ಮೀತ್ ರಾಮ್ ರಹೀಂಗೆ ವಿದೇಶಗಳಿಂದ ಬಂದ ಹಣದ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತದೆ.
ಜಾರಿ ನಿರ್ದೇಶನಾಲಯ ಗುರ್ಮೀತ್ ರಾಮ್ ರಹೀಂ, ಹನಿಪ್ರೀತ್ ಇನ್ಸಾನ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com