ಕಾಶ್ಮೀರ: ಪಾಕ್ ನೆಲದಿಂದ ಕೊರೆದ ಸುರಂಗ ಪತ್ತೆ ಹಚ್ಚಿದ ಬಿಎಸ್‌ಎಫ್

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ನ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ 14 ಅಡಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ನ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ 14 ಅಡಿ ಉದ್ದದ ಸುರಂಗವನ್ನು ಭಾರತೀಯ ಗಡಿ ಭದ್ರತಾ ಪಡೆ(ಬಿಎಸ್ಎಫ್) ಪತ್ತೆ ಮಾಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಗಡಿ ಬಳಿ ಸ್ವಚ್ಛತಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ದಮನ ಸಮೀಪದ ವಿಕ್ರಮ್ ಮತ್ತು ಪಟೇಲ್ ಸೆಕ್ಟರ್ ಮಧ್ಯೆ ಈ ಸುರಂಗ ಮಾರ್ಗ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ನೆಲದಿಂದ ಸುರಂಗ ಕೊರೆಯಲು ಆರಂಭಿಸಲಾಗಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿರುವ ಬೇಲಿಯಿಂದ 14 ಅಡಿ ಉದ್ದ ಕೊರೆಯಲಾಗಿದೆ. 
ಸುರಂಗ ಇನ್ನೂ ಪೂರ್ಣಗೊಳ್ಳುವ ಮತ್ತು ಗಡಿಯಲ್ಲಿನ ಬೇಲಿಯನ್ನು ತಲುಪುವ ಮೊದಲೇ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com