ಮುಂಬೈ: ಮುಂಬೈನ ಎಲ್ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ನಿನ್ನೆ ಸಂಭವಿಸಿದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂತ್ಯೇಂದ್ರ ಕುಮಾರ್ ಕನೋಜಿಯಾ ಎಂಬುವವರನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿರುವುದಾಗಿ ಆಸ್ಪತ್ರೆಯ ಡೀನ್ ಅವಿನಾಶ್ ಸುಪೆ ಅವರು ಪಿಟಿಐಗೆ ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಗಾಯಗೊಂಡ ಒಟ್ಟು 38 ಮಂದಿಯನ್ನು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುಪೆ ಅವರು ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ 10.40ರ ಸುಮಾರಿಗೆ ಮುಂಬೈನ ಎಲ್ಫಿನ್'ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 23 ಮಂದಿ ಮೃತಪಟ್ಟಿದ್ದು, ದುರಂತಕ್ಕೆ ರೈಲ್ವೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎನ್ನಲಾಗಿದೆ.