ನವದೆಹಲಿ: ಸೆ.30 ರಂದು ವಿಜಯದಶಮಿಯ ಅಂಗವಾಗಿ ಕೆಂಪು ಕೋಟೆಯಲ್ಲಿ ದಸರಾ ಆಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿಜಯದಶಮಿಯ ಅಂಗವಾಗಿ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕೆಟ್ಟದ್ದರ ವಿರುದ್ಧ ಒಳ್ಳೆಯದು ಗೆದ್ದ ಸಂಕೇತವಾಗಿ ಆಚರಿಸುವ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
2014 ರ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ನಡೆಯುತ್ತಿರುವ ದಸರಾ ಆಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ. 2015 ರ ದಸರಾ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಗೆ ಶಿಲಾನ್ಯಾಸ ನೆರವೇರಿಸಲು ತೆರಳಿದ್ದರು. 2016 ರಲ್ಲಿ ಲಖನೌ ನಲ್ಲಿ ದಸರಾ ಆಚರಣೆ ಮಾಡಿದ್ದರು.
ವರದಿಗಳ ಪ್ರಕಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ದಸರಾ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.