ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್
ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್, 74 ಮಂದಿಗೆ ಗಾಯ

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ...

ಔರೈಯಾ: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ. 

ಕೆಲ ದಿನಗಳ ಹಿಂದಷ್ಟೇ ಹಳಿ ನಿರ್ವಹಣೆ ವೈಫಲ್ಯದಿಂದಾಗಿ ಮುಜಾಫರ್ ನಗರದಲ್ಲಿ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿತ್ತು. ದುರ್ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿದ್ದವು. ಈ ಘಟನೆ ನಡೆದು ಇನ್ನೂ ವಾರಗಳೂ ಕೂಡ ಕಳೆದಿಲ್ಲ. ಅಷ್ಟರಲ್ಲಾಗಲೇ ಮತ್ತೊಂದು ದುರಂತ ಸಂಭವಿಸಿದೆ. 

ಅಝಮ್ಘಡ್ ದಿಂದ ನವದೆಹಲಿಗೆ ತೆರಳುತ್ತಿದ್ದ ವೇಳೆ ಬೆಳಗಿನ ಜಾವ 2.50ರ ಸುಮಾರಿಗೆ ಘಟನೆ ಸಂಭವಿಸಿದೆ. ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ರೈಜಿನ ಇಂಜಿನ್ ಡಂಪರ್ ಗೆ ಡಿಕ್ಕಿಯಾಗಿದೆ. ಪರಿಣಾಮ 74 ಮಂದಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ರೈಲ್ವೇ ಅಧಿಕಾರಿಗಳು ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಸ್ತುತ ರಕ್ಷಣೆಗೊಳಪಟ್ಟಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ದುರ್ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು, ಪರಿಸ್ಥಿತಿಯನ್ನು ಖುದ್ದಾಗಿ ನಾನೇ ನಿಭಾಯಿಸುತ್ತಿದ್ದೇನೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿಕೊಂಡಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com