ಗೋಹತ್ಯೆ ನಿಷೇಧ ಅಸಂವಿಧಾನಿಕ ಮತ್ತು ಅಕ್ರಮ: ಮಮತಾ ಬ್ಯಾನರ್ಜಿ

ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶಕ್ಕೆ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಕೋಲ್ಕತಾ: ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶಕ್ಕೆ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರಿ ವಿರೋಧ ವ್ಯಕ್ತಪಡಿಸಿದ್ದು, ಗೋಹತ್ಯೆ ನಿಷೇಧ ಅಸಂವಿಧಾನಿಕ ಮತ್ತು ಅಕ್ರಮ ಎಂದು ಸೋಮವಾರ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಕೇಂದ್ರ ನಿರ್ಧಾರ ಸಂವಿಧಾನ ಬಾಹಿರವಾಗಿದ್ದು, ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಮತ್ತು ಕಾನೂನಾತ್ಮಕವಾಗಿ ಗೋಹತ್ಯೆ ನಿಷೇಧವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ.
ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮತ್ತು ನಾಶಮಾಡುವ ಉದ್ದೇಶದಿಂದ ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆರೋಪಿಸಿದ್ದಾರೆ.
ಸಂವಿಧಾನದ ಪ್ರಕಾರ, ರಾಜ್ಯಗಳಿಗೆ ನಿಯಮಗಳನ್ನು ನಿರ್ದೇಶಿಸುವ ಯಾವುದೇ ಹಕ್ಕು ಕೇಂದ್ರ ಸರ್ಕಾರಕ್ಕೆ ಇಲ್ಲ. ಹೀಗಾಗಿ ಇದನ್ನು ನಾವು ಪ್ರಶ್ನಿಸುತ್ತೇವೆ ಎಂದು ಹೇಳಿದ್ದಾರೆ.
ಕಳೆದ ವಾರ ಕೇಂದ್ರ ಪರಿಸರ ಸಚಿವಾಲಯ ಹೊಸ ಅಧಿಸೂಚನೆ ಹೊರಡಿಸಿದ್ದು, ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.
ಪ್ರಾಣಿಗಳ ವ್ಯಾಪಾರಕ್ಕೆ ಹೊರಡಿಸಿರುವ ಹೊಸ ಆದೇಶದನ್ವಯ ಗೋವುಗಳನ್ನು ಭೂಮಾಲೀಕರಿಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದಾಖಲೆಗಳ ಸಮೇತ ತಾನು ಕೃಷಿಕ ಎಂಬುದನ್ನು ಸಾಬೀತುಪಡಿಸುವ ವ್ಯಕ್ತಿಗಳಿಗೆ ಮಾತ್ರ ಜಾನುವಾರುಗಳನ್ನು ಮಾರಾಟ ಮಾಡಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com