ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆ ತೀರ್ಪನ್ನು ಪ್ರಶ್ನಿಸಿ ದಲಿತ ಸಂಘಟನೆಗಳಿಂದ ಭಾರತ್ ಬಂದ್

ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ದಲಿತ ಸಂಘಟನೆಗಳು ಏ.02 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಎಸ್ ಸಿ, ಎಸ್ ಟಿ  ದೌರ್ಜನ್ಯ  ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ದಲಿತ ಸಂಘಟನೆಗಳು ಏ.02 ರಂದು ಭಾರತ್ ಬಂದ್ ಗೆ ಕರೆ ನೀಡಿವೆ. 
ಎಸ್ ಸಿ/ ಎಸ್ ಟಿ ದೌರ್ಜನ್ಯ ಕಾಯ್ದೆಯನ್ನು  ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕವಾಗಿ ಡಿಎಸ್ ಪಿ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಮಾ.20 ರಂದು ಆದೇಶ ನೀಡಿತ್ತು. ಈ ಆದೇಶವನ್ನು ದಲಿತ ಸಂಘಟನೆಗಳು ಪ್ರಶ್ನಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿವೆ. 
ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಈಗಾಗಲೇ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಚಿವ ಥಾವರ್ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com