ಕೊರಿಯಾ(ಛತ್ತೀಸ್ಗಢ): ಛತ್ತೀಸ್ಗಢ ರಾಜ್ಯ ಆರೋಗ್ಯದಲ್ಲಿ ಕೇಂದ್ರದಲ್ಲಿ ವೈದ್ಯರಿಲ್ಲದ ಪರಿಣಾಮ ಆಟೋದಲ್ಲಿಯೇ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಿರುವ ಘಟನೆ ಕೊರಿಯಾದಲ್ಲಿ ನಡೆದಿದೆ.
ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಆಕೆಯನ್ನು ಆಟೋವೊಂದರಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರೇ ಇರಲಿಲ್ಲ. ಬಳಿಕ ಯಾವುದೇ ದಾರಿ ಕಾಣದ ಕುಟುಂಬಸ್ಥ ಆಟೋವೊಂದರಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ.
ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಹಾಗೂ ಮಗುವನ್ನು ವಾರ್ಡ್'ಗೆ ಶಿಫ್ಟ್ ಮಾಡಲಾಗಿತೆ. ಇದೀಗ ಮಗು ಹಾಗೂ ತಾಯಿ ಇಬ್ಬರು ಸುರಕ್ಷಿತವಾಗಿದ್ದಾರೆಂದು ಹೇಳಲಾಗುತ್ತಿದೆ.
ಸಾಕಷ್ಟು ಕಾರಣಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರ ಸಾವಿನ ಸಂಖ್ಯೆ ದೇಶದಲ್ಲಿ ಹೆಚ್ಚಾಗುತಲ್ಲೇ ಇದೆ. ದೇಶದಲ್ಲಿ ಪ್ರತೀವರ್ಷ ಹೆರಿಗೆ ಸಂದರ್ಭದಲ್ಲಿ 45 ಸಾವಿರಕ್ಕೂ ಹೆಚ್ಚು ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್ಒ) ವರದಿಯಲ್ಲಿ ತಿಳಿಸಿದೆ.