ಎಸ್.ಸಿ, ಎಸ್.ಟಿ ಕಾಯ್ದೆ ತೀರ್ಪಿನ ಬಗ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಕೇಂದ್ರ ಸರ್ಕಾರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಕಾಯ್ದೆ ಸಂಬಂಧ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರಸರ್ಕಾರ ಸುಪ್ರೀಂಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಸಿದೆ.
ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್

ನವದೆಹಲಿ :  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಕಾಯ್ದೆ ಸಂಬಂಧ ನೀಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರಸರ್ಕಾರ ಸುಪ್ರೀಂಕೋರ್ಟ್ ಗೆ  ಇಂದು ಮೇಲ್ಮನವಿ ಸಲ್ಲಿಸಿದೆ.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.
ಎಸ್, ಸಿ, ಎಸ್ . ಟಿ ಕಾಯ್ದೆ ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರಸರ್ಕಾರದ ಹಿರಿಯ ವಕೀಲರ ಮೂಲಕ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ತೀರ್ಪು ಮರು ಪರಿಶೀಲಿಸುವಂತೆ ಕೋರಲಾಗಿದೆ  ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ  ವಿವಿಧ ದಲಿತ ಸಮುದಾಯಗಳು ಭಾರತ್ ಬಂದ್'ಗೆ ಕರೆ ನೀಡಿದ್ದು, ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಸ್'ಟಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ ದಾಖಲಿಸಬೇಕು ಮತ್ತು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ತೀರ್ಪೊಂದನ್ನು ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com