ಈ ತಕ್ಷಣಕ್ಕೆ ನಾನು ಹೇಗೆ ಇರಾಕ್ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವ ಬಗ್ಗೆ ಘೋಷಿಸಲಿ ಎಂದು ವಿಕೆ ಸಿಂಗ್ ಪ್ರಶ್ನಿಸಿದ್ದಾರೆ. ಇದೇ ವೇಳೆ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು, ಇರಾಕ್ ನಲ್ಲಿ ಮೃತಪಟ್ಟಿರುವ 27 ಮಂದಿಯ ಕುಟುಂಬ ಸದಸ್ಯರಿಗೆ ಪರಿಹಾರ ಘೋಷಿಸಿದ್ದು, ಪ್ರತಿ ಕುಟುಂಬ ಸದಸ್ಯರಿಗೆ 5 ಲಕ್ಷ ಹಾಗೂ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡಲಾಗುವುದು ಈಗ ಬರುತ್ತಿರುವ 20,000 ರೂಪಾಯಿಯ ಪಿಂಚಣಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.