ಕಾವೇರಿ ವಿವಾದ: ಏ.9ರಂದು ಕೇಂದ್ರದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 16ರಂದು ಕಾವೇರಿ ನಿರ್ವಹಣಾ ಮಂಡಳಿ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 16ರಂದು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಒಪ್ಪಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರ ಸರ್ಕಾರದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ನಿಗದಪಡಿಸಿದೆ.
ತಮಿಳುನಾಡು ಸರ್ಕಾರ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ಜೊತೆಗೆ ಕೇಂದ್ರದ ಅರ್ಜಿಯನ್ನೂ ವಿಚಾರಣೆ ನಡೆಸುವುದಾಗಿ ಸುಪ್ರೀಂ ಪೀಠ ತಿಳಿಸಿದೆ.
6 ವಾರಗಳಳೊಗಾಗಿ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚನೆ ಮಾಡುವಂತೆ ಕಳೆದ ಫೆ.16 ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಆದೇಶ ಪಾಲಿಸದೇ ಸಮಿತಿ ರಚಿಸುವಲ್ಲಿ ವಿಫರವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com